ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ದೂರಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ಗ್ರಾಮದ ನಿವಾಸಿ ಸಿವಿಲ್‌ಎಂಜಿನಿಯರ್‌ಸಚಿನ್‌ಮಾನಪ್ಪ ಪಾಂಚಾಳ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ, ಕಲಬುರಗಿ ಕಾಂಗ್ರೆಸ್‌ಮುಖಂಡ ರಾಜು ಕಪನೂರ ಸೇರಿ ಎಂಟು ಮಂದಿ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್‌ಬರೆದಿಟ್ಟಿದ್ದಾರೆ.
ಎರಡು ಪ್ರಾಮಾಣಿಕ ಗುತ್ತಿಗೆದಾರರ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಸಾವುಗಳಿಗೆ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.

