ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಂಡು ಬೆಳೆದ ಜೆಡಿಎಸ್ ಮನೆಗೆ ದ್ರೋಹ ಬಗೆಯುವುದು ಅಲ್ಲದೆ, ಅಪಪ್ರಚಾರ ಮಾಡುವ ನೀಚ ಬುದ್ಧಿಯನ್ನು ಬಿಡಿ ಸಿದ್ದರಾಮಯ್ಯ! ಎಂದು ಜೆಡಿಎಸ್ ತಾಕೀತು ಮಾಡಿದೆ.
ನೀವು ಈ ಮಟ್ಟಕ್ಕೆ ಬೆಳೆಯಲು ಕಾರಣ ಜೆಡಿಎಸ್ ಪಕ್ಷ ಮತ್ತು ಹೆಚ್.ಡಿ.ದೇವೇಗೌಡರು ಎನ್ನುವುದನ್ನು ಮರೆಯಬೇಡಿ.
ಮುಖ್ಯಮಂತ್ರಿ ಆಗಲು ಖರ್ಗೆ, ಪರಮೇಶ್ವರ್ ಅವರಂತಹ ಹಿರಿಯ ದಲಿತನಾಯಕರನ್ನು ತುಳಿದ ಮನೆಹಾಳು ಬುದ್ಧಿಯನ್ನು ಬಿಡಿ ಸಿದ್ದರಾಮಯ್ಯ!
ಚುನಾವಣೆಗಳಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಹಳ್ಳ ತೋಡಿ, ಅಧಿಕಾರದ ಪರಮ ಸುಖ ಅನುಭವಿಸುತ್ತಿರುವ ಮಜಾವಾದಿಯ ಭಸ್ಮಾಸುರ ಗುಣ ಈಗ ಮೂಲ ಕಾಂಗ್ರೆಸ್ಸಿಗರಿಗೆ ಅರ್ಥವಾಗಿ ಸಿಡಿದೆದ್ದಿದ್ದಾರೆ ಎಂದು ಜೆಡಿಎಸ್ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ಮಾಡಿದೆ.

