ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯು ಸಣ್ಣ ವ್ಯಾಪಾರಿಗಳ ಪಾಲಿಗೆ ಸುಲಿಗೆ ಸಂಸ್ಥೆಯೇ? ಆಗಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.
ಸಣ್ಣ ವ್ಯಾಪಾರಿಗಳಿಗೆ ರಾತ್ರೋರಾತ್ರಿ ಲಕ್ಷಾಂತರ ರೂ. GST ಪಾವತಿಸುವಂತೆ ನೋಟಿಸ್ ನೀಡುವ ಮೂಲಕ ಸಾವಿರಾರು ಕುಟುಂಬಗಳನ್ನು ಬೀದಿಗೆ ತಳ್ಳುವ ಕೆಲಸಕ್ಕೆ ಕೈ ಹಾಕಿರುವ ಕಾಂಗ್ರೆಸ್ ಸರ್ಕಾರದ ದಮನಕಾರಿ ನಡೆ ಖಂಡನೀಯ.
ಹಣ್ಣು, ತರಕಾರಿ, ಹೂ ವ್ಯಾಪಾರಿಗಳು, ಹಾಲು ಮಾರುವವರು, ಬೇಕರಿ ಸೇರಿದಂತೆ ಸಣ್ಣ ಸಣ್ಣ ವ್ಯಾಪಾರಿಗಳ ಮೇಲೆ ಜಿಎಸ್‌ಟಿ ಬರೆ ಎಳೆದಿರುವುದು ಅಕ್ಷಮ್ಯ. ಅಂದಿನ ವ್ಯಾಪಾರದಲ್ಲಿ ಆ ದಿನದ ಜೀವನ ನಡೆಸುವ ಸಣ್ಣ ವ್ಯಾಪಾರಿಗಳಿಗೆಲ್ಲ ಸಣ್ಣ ಸುಳಿವೂ ನೀಡದೆ ಲಕ್ಷಾಂತರ ರೂ. ತೆರಿಗೆ ಕಟ್ಟುವಂತೆ ನೋಟಿಸ್ ಜಾರಿಗೊಳಿಸಿರುವುದು ಆಘಾತಕಾರಿ ಕ್ರಮವಾಗಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೂಡಲೇ ಮಧ್ಯಪ್ರವೇಶ ಮಾಡಿ ಈ ಸಮಸ್ಯೆ ಬಗೆಹರಿಸಬೇಕು. ಸಣ್ಣ ವ್ಯಾಪಾರಿಗಳನ್ನು ಜಿಎಸ್‌ಟಿ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸಿದೆ.