ಕುರ್ಚಿ ಕಿತ್ತಾಟದಲ್ಲಿ ರೈತರ ಮರೆತ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿರುವ ಸರ್ಕಾರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದರೂ ಕ್ಯಾರೆ ಎನ್ನುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.

ಒಂದು ಕಡೆ ಹೆಸರು, ಸೂರ್ಯಕಾಂತಿ, ಉದ್ದಿನ ಕಾಳು, ಸೋಯಾಬೀನ್ ಬೆಳೆದ ರೈತರು ತಮ್ಮ ಫಸಲು ಮಾರಲಾಗದೆ ಸಂಕಷ್ಟದಲ್ಲಿದ್ದರೆ, ಮತ್ತೊಂದು ಕಡೆ ಕಬ್ಬು ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.

- Advertisement - 

ಸಿಎಂ ಸಿದ್ದರಾಮಯ್ಯ, ಅಲಗಾಡುತ್ತಿರುವ ಕುರ್ಚಿಯಿಂದ ಹತಾಶರಾಗಿರುವ ತಾವು ತಾಳ್ಮೆ ಕಳೆದುಕೊಂಡು ಎಲ್ಲರ ಮೇಲೂ ಸಿಡಿಮಿಡಿ ಎನ್ನುತ್ತಿದ್ದೀರಿ. ನಾಯಕತ್ವ ಬದಲಾವಣೆ ಗೊಂದಲದಿಂದ ಸಚಿವರು, ಶಾಸಕರು ದಿಕ್ಕು ತೋಚದೆ ಹೈರಾಣಾಗಿ ಮನೆಯಿಂದ ಆಚೆ ಬರುತ್ತಿಲ್ಲ. ಇನ್ನು ರೈತರು ತಮ್ಮ ಸಂಕಷ್ಟ ಯಾರ ಬಳಿ ಹೇಳಿಕೊಳ್ಳಬೇಕು ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ?.

ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸದ ಈ ರೈತವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದ್ದರೆಷ್ಟು, ಹೋದರೆಷ್ಟು. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

- Advertisement - 

 

 

 

Share This Article
error: Content is protected !!
";