ವಾಲ್ಮೀಕಿ ನಿಗಮದ ನಿಯಮಬಾಹಿರವಾಗಿ ವರ್ಗಾವಣೆಯಾದ ಮೊತ್ತ ಸರ್ಕಾರ ತುಂಬಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಶಾಸಕರಾದ ಬಿ.ಎಂ.ನಾಗರಾಜ
, ಟಿ.ರಘುಮೂರ್ತಿ, ಬಸನಗೌಡ ತುರವಿಹಾಳ,

ರಾಜಾ ವೇಣುಗೋಪಾಲ ನಾಯಕ, ಡಾ.ಶ್ರೀನಿವಾಸ, ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಮತ್ತಿತರ ಮುಖಂಡರನ್ನೊಳಗೊಂಡ ವಾಲ್ಮೀಕಿ ನಾಯಕ ಸಮಾಜದ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ,

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಯಮಬಾಹಿರ ವರ್ಗಾವಣೆಯಾಗಿದ್ದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಹಾಗೂ ತಳವಾರ ಹೆಸರಿನಲ್ಲಿ ನಕಲಿ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿರುವುದನ್ನು ತಡೆಯಲು ಅಗತ್ಯ ಕ್ರಮವಹಿಸಬೇಕು ಎಂದು ವಾಕ್ಮೀಕಿ ಸಮುದಾಯದ ಸ್ವಾಮೀಜಿಗಳು ಮತ್ತು ಶಾಸಕರು, ಮುಖಂಡರು ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದು ಈ ಬಗ್ಗೆ ತಕ್ಷಣ ಸಭೆ ಕರೆದು ಚರ್ಚಿಸಿ, ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಗಕ್ಕೆ ಭರವಸೆ ನೀಡಿದರು.

 

 

- Advertisement -  - Advertisement -  - Advertisement - 
Share This Article
error: Content is protected !!
";