ಗೃಹ ಸಚಿವರು, ಮುಖ್ಯಮಂತ್ರಿಗಳು ಕೂಡಲೇ ರಾಜಿನಾಮೆ ನೀಡಲಿ-ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೈಲಿನ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಿ ಉಗ್ರರಿಗೆ, ಖೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿ, ನೈತಿಕ ಹೊಣೆ ಹೊತ್ತು ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.
ಜೈಲಿನ ಕೈದಿಗಳಿಗೆ ವಿಶೇಷ ಸವಲತ್ತು ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಲಾಯಿತು.

ಉಗ್ರರಿಗೆ, ಜೈಲು ಶಿಕ್ಷೆಯಲ್ಲಿರುವ ಅಪರಾಧಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಾಯಿತು.

- Advertisement - 

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಅತ್ಯಾಚಾರ, ಕೊಲೆ, ದರೋಡೆ ಪ್ರಕರಣಗಳು ಸರಣಿ ರೂಪದಲ್ಲಿ ಘಟಿಸುತ್ತಲೇ ಇದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಅಂಕುಶ ಹಾಕುವ ಬದ್ಧತೆಯನ್ನು ಈ ಸರ್ಕಾರ ತೋರುತ್ತಿಲ್ಲ. ದುಷ್ಕರ್ಮಿಗಳು, ದೇಶದ್ರೋಹಿಗಳು ಕ್ರಿಮಿನಲ್ ಕೃತ್ಯಗಳನ್ನು ಎಸಗಲು ಯಾರಿಗೂ ಹೆದರುತ್ತಿಲ್ಲ, ಏಕೆಂದರೆ ಅಪರಾಧ ಎಸಗಿ ಬಂಧನವಾದರೆ ಜೈಲುಗಳಲ್ಲಿ ರಾಜಾತಿಥ್ಯ ಸಿಗುತ್ತದೆ ಎಂಬ ಖಾತ್ರಿ ಅವರಿಗಿದೆ. ಪರಪ್ಪನ ಅಗ್ರಹಾರದಲ್ಲಿ ದೇಶವಿದ್ರೋಹಿ ಉಗ್ರಗಾಮಿಗಳಿಗೆ, ರೇಪಿಸ್ಟ್, ಸ್ಮಗ್ಲರ್ಸ್, ಕೊಲೆಗೆಡುಕರಿಗೆ ವಿಶೇಷ ಸವಲತ್ತು ದೊರೆಯುತ್ತಿದೆ ಎಂದು ಆರೋಪಿಸಿದರು.

- Advertisement - 

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನೈತಿಕತೆ ಇಲ್ಲದ ನಾಚಿಕೆಗೇಡಿತನದ ದುರಾಡಳಿತದ ಪ್ರತಿಫಲನ ಪರಪ್ಪನ ಅಗ್ರಹಾರದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಯಂತವರಿಗೆಉಗ್ರ ಸಂಘಟನೆ ISISಗೆ ಉಗ್ರ ಮನಸ್ಥಿತಿಯ ಯುವಕರನ್ನು ನೇಮಕಮಾಡುತ್ತಿದ್ದ ಜುಹಾದ್ ಹಮೀದ್ ಶಕೀಲ್ ಮನ್ನಾನಿಗೆ ಸಕಲ ಸವಲತ್ತು ನೀಡಿ, ಐಷಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ಕ್ರಮ, ಇದು ಜೈಲು ವ್ಯವಸ್ಥೆ ಹಾಗೂ ಅಧಿಕಾರಿಗಳ ದೇಶದ್ರೋಹದ ಕೃತ್ಯವನ್ನು ಖಂಡಿಸಲಾಯಿತು.

ಕೂಡಲೇ ಇದಕ್ಕೆ ಕಾರಣರಾದ ಜೈಲು ಸಿಬ್ಬಂದಿ, ಅಧಿಕಾರಿಗಳನ್ನು ಬಂಧಿಸಿ ದೇಶ ದ್ರೋಹಿ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ಕೈಗೆತ್ತಿಕೊಳ್ಳಲಿ ಎಂದು ಒತ್ತಾಯಿಸಲಾಯಿತಲ್ಲದೇ, ಆತ್ಮಗೌರವ ಇದ್ದರೆ ಗೃಹ ಸಚಿವರು ಈ ಕೂಡಲೇ ರಾಜಿನಾಮೆ ನೀಡಲಿ, ಬದ್ಧತೆ ನೈತಿಕತೆ ಇದ್ದರೆ ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿ ಹೊರಲಿ, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ದಾವೆ ಹೂಡಲಿ ಎಂದು ಹೋರಾಟಗಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿಟಿ ರವಿ, ಶಾಸಕರಾದ ಡಾ.ಅಶ್ವಥ್ ನಾರಾಯಣ, ಗೋಪಾಲಯ್ಯ, ಎಂ.ಕೃಷ್ಣಪ್ಪ,  ಉದಯ್ ಗರುಡಾಚಾರ್, ಎಂ.ಮುನಿರಾಜು, ಧೀರಜ್ ಮುನಿರಾಜು,  ಸಿ.ಕೆ.ರಾಮಮೂರ್ತಿ, ಜಿಲ್ಲಾಧ್ಯಕ್ಷ ಎಸ್ ಹರೀಶ್, ಸಪ್ತಗಿರಿ ಗೌಡ, ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

 

 

Share This Article
error: Content is protected !!
";