ಕಲೆ, ಸಾಹಿತ್ಯ, ಸಂಸ್ಕೃತಿ ಶ್ರೀಮಂತ ಗೊಳಿಸಲು ಕನ್ನಡ ಪ್ರಜ್ಞೆ ಮೂಡಲಿ- ಬಿಇಓ

News Desk

ಕಲೆ, ಸಾಹಿತ್ಯ, ಸಂಸ್ಕೃತಿ ಶ್ರೀಮಂತ ಗೊಳಿಸಲು ಕನ್ನಡ ಪ್ರಜ್ಞೆ ಮೂಡಲಿ- ಬಿಇಓ
ಚಂದ್ರವಳ್ಳಿ ನ್ಯೂಸ್ ಹಿರಿಯೂರು
:
ಕನ್ನಡ ನಮ್ಮ ತಾಯಿಯ ಭಾಷೆ. ನೆಲದ ಭಾಷೆ ಅನ್ನದ ಭಾಷೆ. ಹೃದಯದ ಭಾಷೆ. ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ಗೌರವಿಸಲೇಬೇಕು ಅತ್ಯಂತ ಪ್ರಾಚೀನ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ. ಸುಂದರ ಲಿಪಿಯನ್ನು ಹೊಂದಿರುವ ಭಾಷೆ. ಕನ್ನಡ ಭಾಷೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿಎಂ ತಿಪ್ಪೇಸ್ವಾಮಿ ಹೇಳಿದರು.

 ತಾಲೂಕಿನ ಜವನಗೊಂಡನಹಳ್ಳಿ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಕನ್ನಡ ಪ್ರಜ್ಞೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು ಪ್ರಾದೇಶಿಕ ಭಾಷೆಯಿಂದ ಮಾತ್ರ ನಮ್ಮಲ್ಲಿರುವ ಕಷ್ಟ ಸುಖ ಸಂತೋಷ ದುಃಖ ದುಮ್ಮಾನ ಹಂಚಿಕೊಳ್ಳಲು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಎದೆಯ ಭಾಷೆಯಾದ ಕನ್ನಡ ಉಳಿಯಬೇಕಾದರೆ ಕನ್ನಡದ ಪ್ರಜ್ಞೆ ಜಾಗೃತವಾಗಬೇಕು ಎಂದು ತಿಳಿಸಿದರು.

- Advertisement - 

ಮುಖ್ಯ ಅತಿಥಿ ಹಿರಿಯ ಸಾಹಿತಿ ಪ್ರೊ. ಜಿ ಶರಣಪ್ಪ ಮಾತನಾಡುf ಕರ್ನಾಟಕದಲ್ಲಿ ಅನ್ಯ ಭಾಷೆಗಳನ್ನು ಒಪ್ಪಿಕೊಳ್ಳುವ ಮತ್ತು ಹಪ್ಪಿಕೊಳ್ಳುವ ಸಂಸ್ಕೃತಿ ಸಂಸ್ಕಾರದಿಂದ ವಿಶ್ವಕ್ಕೆ ಕರ್ನಾಟಕ ಮಾದರಿ ರಾಜ್ಯವಾಗಿದೆ. ಕನ್ನಡ ಉಳಿಯಬೇಕಾದರೆ ನಾಡಿನ ನೆಲ ಜಲ ಸಂಪತ್ತಿನ ರಕ್ಷಣೆಗೆ ನಾವೆಲ್ಲರೂ ಹೋರಾಟ ಮಾಡಬೇಕು ಹೇಳಿದರು.

ಎಚ್ ಎಸ್ ಶಫಿವುಲ್ಲಾ ವಿಶೇಷ ಉಪನ್ಯಾಸ ನೀಡಿ ಮಾತನಾಡಿ ಕನ್ನಡ ನಾಡು ವೈಭವದ ಬೀಡು ಕವಿಗಳು ಕಲಾವಿದರು ಸಂತರು ಶರಣರು ಜನ್ಮ ನೀಡಿದ ನಾಡು ಕನ್ನಡ ಭಾಷೆಗೆ ಎರಡುವರೆ ಸಾವಿರ ವರ್ಷಗಳ ಇತಿಹಾಸವಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.

- Advertisement - 

ಶಾಸ್ತ್ರೀಯ ಸ್ಥಾನಮಾನದ ಗೌರವ ಕೂಡ ಬಂದಿದೆ ಆದಿ ಕವಿ ಪಂಪನಿಂದ ಹಿಡಿದು ಆಧುನಿಕ ಕವಿ ಹಂಪ ನಾ ವರೆಗೆ ಸಮೃದ್ಧಿಯಾಗಿ ಬೆಳೆದಿದೆ. ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ನಾಡಿನ ಕಲೆ ಸಾಹಿತ್ಯ ಸಂಸ್ಕೃತಿಗೆ ಹೆಚ್ಚು ಹೊತ್ತು ಕೊಡುತ್ತಿದೆ ಪ್ರಸ್ತುತ ಈಗಿನ ಮಕ್ಕಳಲ್ಲಿ ಯುವಕರಲ್ಲಿ ಸಾರ್ವಜನಿಕರಲ್ಲಿ ಭಾಷಾಭಿಮಾನ ಬೆಳೆಸಬೇಕಿದೆ. ನಾಡಿನ ಇತಿಹಾಸ ಉಳಿಸಲು ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.

ಕ್ಷೇತ್ರ ಸಮನ್ವಯ ಅಧಿಕಾರಿ ಆರ್ ಟಿ ಶ್ರೀನಿವಾಸ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ. ರಾಮಚಂದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ, ನಿವೃತ್ತ ಶಿಕ್ಷಕ ಗುರುಮೂರ್ತಿ, ತಾಲೂಕು ಕಸಾಪ ವಿಶೇಷ ಪ್ರತಿನಿಧಿ ವೇದಪುಷ್ಪ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಿವಾಸಮೂರ್ತಿ, ಕಾರ್ಯದರ್ಶಿ ರಾಘವೇಂದ್ರ, ಮುಖ್ಯ ಶಿಕ್ಷಕ ರಾಕೇಶ್, ಕರಾಟೆ ಶಿಕ್ಷಕ ರಂಗಸ್ವಾಮಿ, ದೈಹಿಕ ಶಿಕ್ಷಕ ಹರಳಪ್ಪ, ಶಿಕ್ಷಕರಾದ ಗುರು, ಶಾಂತಮ್ಮ, ಶಾಹಿನಾ, ಶಕೀಲಾ ಅಹ್ಮದ್, ಅಮೂಲ್ಯ ಉಪಸ್ಥಿತರಿದ್ದರು.

 

Share This Article
error: Content is protected !!
";