ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲೋಕಾಯುಕ್ತರು ರಾಜ್ಯ ಸರ್ಕಾರದ ರಕ್ಷಣೆಗೆ ನಿಂತಿದ್ದು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆ.ಆರ್.ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ರಘು ದಾವಣಗೆರೆ ಆಗ್ರಹ ಮಾಡಿದರು.
ಚಿತ್ರದುರ್ಗ ಪ್ರವಾಸ ಮಂದಿರದಲ್ಲಿ ಭಾನವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸರ್ಕಾರದ ರಕ್ಷಣೆಗೆ ನಿಂತಿರುವ ಲೋಕಾಯುಕ್ತರು ರಾಜೀನಾಮೆ ನೀಡಲಿ ಹಾಗೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರನ್ನು ವಜಾಗೊಳಿಸಿ ನ್ಯಾಯಾಂಗ ಉಸ್ತವಾರಿಯಲ್ಲಿ ಸಿಬಿಐ ತನಿಖೆಗೆ ಅವರು ಆಗ್ರಹಿಸಿದರು,
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಕೆ.ಎಸ್ ವೀರಭದ್ರಪ್ಪ, ಬದ್ರಿ, ರಾಜ್ಯ ಕಾರ್ಯನಿರ್ವಾಹಕ ಸಮಿತಿಯ ಸದಸ್ಯ ಮಹೇಶ್ ನಗರಂಗೆರೆ, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಎಲ್.ಟಿ ನಾಗರೆಡ್ಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲರಾಜ್ ಯಾದವ್ ಉಪಸ್ಥಿತರಿದ್ದರು.