ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರೇಣುಕಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಲು ನಾವೆಲ್ಲರೂ ಶ್ರಮಿಸೋಣ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯದರ್ಶಿ (ಆಡಳಿತ) ಹಾಗೂ ರಾಜ್ಯಮಟ್ಟದ ನೋಡಲ್ ಅಧಿಕಾರಿ ಜಾಫರ್ ಷರೀಪ್ ಸುತಾರ್ ಹೇಳಿದರು.
ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಣುಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನದ ಅಂಗವಾಗಿ ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.
ಪೋಷಕರು, ಶಿಕ್ಷಕರು, ಗ್ರಾಮ ಪಂಚಾಯಿತಿಯವರು ಸೇರಿ ರೇಣುಕಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಲು ವಿಸ್ತøತವಾಗಿ ಚರ್ಚಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 2025ರ ನವೆಂಬರ್ 14 ರಿಂದ 2026ರ ಜನವರಿ 24 ರವರೆಗೂ ಮುಂದಿನ 10 ವಾರಗಳ ಕಾಲ “ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಒಂದು ದಿನ “ಮಕ್ಕಳ ವಿಶೇಷ ಗ್ರಾಮ ಸಭೆ ಆಯೋಜನೆ ಮಾಡಬೇಕಾಗಿದ್ದು, ಅದರಲ್ಲೂ ವಿಶೇಷವಾಗಿ ರೇಣುಕಾಪುರ ಗ್ರಾಮ ಕಾಯಕ ಗ್ರಾಮಕ್ಕೆ ಆಯ್ಕೆಯಾಗಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿ ಸಾಧಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಮತ್ತು ಕುಡಿಯುವ ನೀರು, ನೈರ್ಮಲ್ಯ ವಿಭಾಗದ ರಾಜ್ಯ ಸಮಾಲೋಚಕ ಆನಂದ್, ರೇಣುಕಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಾನಜ್ಜ, ಉಪಾಧ್ಯಕ್ಷೆ ಮಂಜಮ್ಮ, ಸದಸ್ಯರಾದ ದೇವಿರಮ್ಮ, ಪಾಲಕ್ಕ, ನರಸಿಂಹಪ್ಪ, ವೆಂಕಟೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಸಿ ಶಶಿರಾಜ್,
ಲೆಕ್ಕಸಹಾಯಕ ವೀರನಾಯಕ, ಬಿಲ್ ಕಲೆಕಲೆಕ್ಟರ್ ಗುಜ್ಜಪ್ಪ, ಗಣಕಯಂತ್ರ ನಿರ್ವಾಹಕಿ ಚಂದ್ರಮ್ಮ, ಜೆಜೆಎಂ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್ ನಾಡರ್, ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ಡಿಟಿಎಸ್‍ಯು ಸಮಾಲೋಚಕರಾದ ಜಿ.ಎಸ್.ಕಿರಣ್ ಪಾಟೀಲ್, ಚಂದ್ರಕಾಂತ್, ಯಲ್ಲಪ್ಪ, ಪ್ರವೀಣ್, ಗೀತಾಲಕ್ಷ್ಮೀ, ಮುಖ್ಯ ಶಿಕ್ಷಕ ಮಂಜಣ್ಣ, ಸಹ ಶಿಕ್ಷಕರಾದ ಜ್ಯೋತಿ, ಅಶ್ವಿನಿ, ನೀಲಮ್ಮ, ಕೆಂಚರಾಜು, ಶ್ವೇತಾ , ತಿಪ್ಪೇಸ್ವಾಮಿ, ತಳಕು ಪೊಲೀಸ್ ಠಾಣೆಯ ಪಿಎಸ್‍ಐ ಚೇತನ್ ಕುಮಾರ, ಎಎಸ್‍ಐ ಮಂಜಣ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ: ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯದರ್ಶಿ (ಆಡಳಿತ) ಹಾಗೂ ರಾಜ್ಯಮಟ್ಟದ ನೋಡಲ್ ಅಧಿಕಾರಿ ಜಾಫರ್ ಷರೀಪ್ ಸುತಾರ್ ಅವರ ಅಧ್ಯಕ್ಷತೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಕೆಎಸ್‍ಆರ್‍ಡಬ್ಲ್ಯೂಎಸ್‍ಪಿ ಕಾರ್ಯಕ್ರಮ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಅಮರನಾಥ್ ಜೈನ್, ಸಹಾಯಕ ಕಾರ್ಯಪಾಕ ಅಭಿಯಂತರರು, ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಸಪೋರ್ಟ್ ಇಂಜಿನಿಯರ್ ವಿಭಾಗ, ಕಚೇರಿ ವ್ಯವಸ್ಥಾಪಕರು, ಲೆಕ್ಕಾಶಾಖೆಯ ಸಿಬ್ಬಂದಿಗಳು, ಲ್ಯಾಬ್ ಸಿಬ್ಬಂದಿಗಳು, ಡಿಪಿಎಂ ಮತ್ತು ಡಿಟಿಎಸ್‍ಯು ಸಮಲೋಚಕರು, ಎಸ್‍ಬಿಎಂ ಗ್ರಾಮೀಣ ಯೋಜನೆ ಐಇಸಿ ಸಮಾಲೋಚಕರು ಇದ್ದರು.

