ಬಲಿಷ್ಠ, ಸ್ವಾವಲಂಬಿ, ಸಮೃದ್ಧ ಭಾರತ ನಿರ್ಮಿಸಲು ಒಟ್ಟಾಗಿ ಕೆಲಸ ಮಾಡೋಣ-ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ನವದೆಹಲಿಯ ಗೃಹ ಕಚೇರಿಯಲ್ಲಿ ಹೆಮ್ಮೆಯ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಕ್ಕೆ ಗೌರವ ಸಮರ್ಪಣೆ ಮಾಡಿದರು.

ನಮ್ಮ 79ನೇ  ಸ್ವಾತಂತ್ರ್ಯದಿನದ ಸ್ಮರಣೀಯ ಸಂದರ್ಭದಲ್ಲಿ, ಅವರು ಅಧಿಕೃತ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಗೌರವ ಕುಮಾರಸ್ವಾಮಿ ಅವರಿಗೆ ಸಿಕ್ಕಿತು.

- Advertisement - 

ನಮಗೆ ಈ ಅಮೂಲ್ಯ ಸ್ವಾತಂತ್ರ್ಯವನ್ನು ನೀಡಿದ ತ್ಯಾಗ ಮಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರಿಗೆ ನಾನು ಹೆಮ್ಮೆ ಮತ್ತು ಭಕ್ತಿಯಿಂದ ನಮಸ್ಕರಿಸಿದ್ದೇನೆ. ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಕರೆ ನೀಡಿದರು.

 

- Advertisement - 

 

 

 

Share This Article
error: Content is protected !!
";