ಮುಂಬೈನಂತೆ ಬಿಜೆಪಿ-ಜೆಡಿಎಸ್ ಗೆಲುವು ನಿಶ್ಚಿತ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿ, ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ಬಹಳ ದೊಡ್ಡ ಜಯ ಗಳಿಸಿವೆ.

 ಈ ಅಭೂತಪೂರ್ವ ಜಯಕ್ಕೆ ಕಾರಣೀಕರ್ತರಾದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬೊಮ್ಮಾಯಿ ಸಲ್ಲಿಸಿದ್ದಾರೆ.

- Advertisement - 

ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮುಂಬೈ ಚುನಾವಣೆಯಂತೆ ಬಿಜೆಪಿ-ಜೆಡಿಎಸ್ ಗೆಲುವು ಸಾಧಿಸುವುದು ನಿಶ್ಚಿತ. ಈ ಚುನಾವಣೆಯ ಬಿಜೆಪಿ ಗೆಲುವಿನಲ್ಲಿ ಕಾಂಗ್ರೆಸ್​​ನ ಅಂತ್ಯ ಆರಂಭ ಎಂದು ತಿಳಿಸಿದ್ದಾರೆ‌.

ಯಡಿಯೂರಪ್ಪ ಅಭಿನಂದನೆ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಭಾರೀ ಗೆಲುವು ಸಾಧಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ. ಮೋದಿ ಅವರ ನೇತೃತ್ವದ ಕೇಂದ್ರದ ಎನ್​ಡಿಎ ಸರ್ಕಾರ ಮತ್ತು ಮಹಾರಾಷ್ಟ್ರದ ನಮ್ಮ ಸರ್ಕಾರ ಮಾಡುತ್ತಿರುವ ಜನಪರ ಕಾರ್ಯಗಳನ್ನು ಮೆಚ್ಚಿ ಜನತೆ ಈ ಗೆಲುವು ತಂದುಕೊಟ್ಟಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

- Advertisement - 

ಬಿಜೆಪಿಯನ್ನು ಬೆಂಬಲಿಸಿದ ಪ್ರಬುದ್ಧ ಮತದಾರರು, ಗೆಲುವಿಗಾಗಿ ಶ್ರಮಿಸಿದ ಎಲ್ಲ ಕಾರ್ಯಕರ್ತರು ಮತ್ತು ಮುಖಂಡರಿಗೆ ಧನ್ಯವಾದ ಸಮರ್ಪಿಸಿರುವ ಅವರು, ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ: ಇತ್ತ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಜಯಭೇರಿ ಹಿನ್ನೆಲೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಂಬೈನ ಅತಿದೊಡ್ಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷವು ಭಾರಿ ಮುನ್ನಡೆ ಸಾಧಿಸಿದೆ. ಇದು ಸಂತಸದ ವಿಚಾರ. ಕಾಂಗ್ರೆಸ್‍ನವರು ಮತಪತ್ರದಲ್ಲಿ ಚುನಾವಣೆ ಮಾಡಿದರೆ ಗೆಲ್ಲುವುದಾಗಿ ಹೇಳುತ್ತಿದ್ದರು. ಅದರಲ್ಲೂ ನಮ್ಮ ರಾಜ್ಯದಲ್ಲಿ ಸೋತಿದ್ದಾರೆ. ಈಗ ಮತ್ತೆ ಇವಿಎಂ ಹ್ಯಾಕ್ ಆಗಿದೆ ಎನ್ನಲಿದ್ದಾರೆ. 30 ವರ್ಷಗಳ ನಂತರ ಬಿಜೆಪಿ ಮೇಯರ್ ಚುಕ್ಕಾಣಿ ಹಿಡಿಯುವುದು ಅತ್ಯಂತ ಖುಷಿ ತಂದಿದೆ ಎಂದು ತಿಳಿಸಿದರು.

ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಪ್ತಗಿರಿಗೌಡ ಮಾತನಾಡಿ, ರಾಷ್ಟ್ರದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ ಬೃಹನ್ಮುಂಬೈಯಲ್ಲಿ ಬಿಜೆಪಿ ಮಿತ್ರಕೂಟ ಗೆದ್ದಿದೆ. ಮುಂಬೈ ಜನತೆ ನಿಜವಾದ ಶಿವಸೇನೆ ಯಾರೆಂದು ತೋರಿಸಿದ್ದಾರೆ. ಅಲ್ಲಿ ಶಿವಸೇನೆ ಹೆಸರಿನಲ್ಲಿ ಬಹಳಷ್ಟು ಬೂಟಾಟಿಕೆ ನಡೆಯುತ್ತಿತ್ತು ಎಂದರು.

 

 

Share This Article
error: Content is protected !!
";