ವಿದ್ಯುತ್ ತಂತಿ(ವೈಯರ್)​ ತಗುಲಿ ಮೃತಪಟ್ಟ ಲೈನ್​​ಮ್ಯಾನ್ ಮನು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ತಿಪಟೂರು:
ವಿದ್ಯುತ್ ಪರಿವರ್ತಕ ಅಳವಡಿಸುವಾಗ ವಿದ್ಯುತ್ ತಂತಿ(ವೈಯರ್)​ ತಗುಲಿ ಲೈನ್​​ಮ್ಯಾನ್​​ ಮೃತ ಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಶಾಕ್ ನಿಂದಾಗಿ ಕೆ.ಪಿ. ಮನು (26) ಮೃತ ದುರ್ದೈವಿ. ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ ಎನ್ನಲಾಗಿದೆ.

- Advertisement - 

ವಿದ್ಯುತ್ ಪರಿವರ್ತಕ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಆರೋಪ ಕೇಳಿಬಂದಿದ್ದು, ಲೈನ್​​ಮ್ಯಾನ್​​ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಮತ್ತು ​ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಘಟನೆ ಬಗ್ಗೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - 

 

Share This Article
error: Content is protected !!
";