ಮತದಾರ ಚೀಟಿಗೆ ಆಧಾರ್ ಲಿಂಕ್ ಮಾಡಿ ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ-ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ.

- Advertisement - 

ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ.

 ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

- Advertisement - 

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣೆ ಆಯೋಗದ ಮೇಲೆ ಅನುಮಾನ ಪಟ್ಟಿದ್ದು ಅವರ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮತಗಳ್ಳತನವಾಗಿದೆ ಎಂದು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ ಪಟ್ಟಿರುವುದು ಕಿಡಿಗೇಡಿ ಪಿತೂರಿಯಾಗಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳಲು ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

 

Share This Article
error: Content is protected !!
";