ನವೆಂಬರ್-20 ರಂದು ಮದ್ಯ ಮಾರಾಟ ಸ್ಥಗಿತ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ
, ಲಂಚಕ್ಕೆ ಬೇಡಿಕೆ ಇಡುತ್ತಿರುವುದು ಮಿತಿ ಮೀರಿದೆ. ಭ್ರಷ್ಟಾಚಾರ ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮದ್ಯ ಮಾರಾಟಗಾರರ ಒಕ್ಕೂಟ ನ.20ರಂದು ಮದ್ಯ ಬಂದ್‌ಗೆ ಕರೆ ಕೊಟ್ಟಿದೆ.

- Advertisement - 

ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಲಂಚ ಸ್ವೀಕಾರ ಎಂದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿ ಮತ್ತು ಕೇಂದ್ರ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಮುಗಿ ಬೀಳುತ್ತಿದ್ದಾರೆ.

- Advertisement - 

ಈಗ ಮದ್ಯ ಮಾರಾಟಗಾರರ ಸಂಘ ಭ್ರಷ್ಟಾಚಾರ ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 20ರಂದು ಮದ್ಯ ಮಾರಾಟ ಬಂದ್ ಮಾಡಲು ನಿರ್ಧರಿಸಿದ್ದಾರೆ. ಅಬಕಾರಿ ಸಚಿವರನ್ನ ಬದಲಾವಣೆ ಮಾಡಬೇಕು. ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ಸಭೆ ಮಾಡಬೇಕು.

ಹಣಕಾಸು ಇಲಾಖೆಗೆ ನಮ್ಮ ಇಲಾಖೆಯನ್ನ ಸೇರಿಸಬೇಕು ಎಂದು ಮದ್ಯ ಮಾರಾಟಗಾರರ ಒಕ್ಕೂಟ ಆಗ್ರಹಿಸಿದೆ. ಇನ್ನೂ ನವೆಂಬರ್ 20ರಂದು ಮದ್ಯ ಬಂದ್‌ಗೆ ಹಲವು ಮದ್ಯದಂಗಡಿ ವ್ಯಾಪಾರಸ್ಥರು ಬೆಂಬಲ ನೀಡಿದ್ದಾರೆ.

- Advertisement - 

ಬೆಳಗ್ಗೆಯಿಂದ ಸಂಜೆವರೆಗೂ ಮದ್ಯ ಸಿಗಲ್ಲ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಿ ಕಾನೂನು ತಿದ್ದುಪಡಿ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಿದ್ದಾರೆ.

 

Share This Article
error: Content is protected !!
";