ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸಿ

News Desk

ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸಿ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆ ತೋರಬೇಕು ರಾಜ್ಯ ಸರಕಾರ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತಾಕೀತು ಮಾಡಿದರು.

ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತುರ್ತು ಗಮನ ಹರಿಸಬೇಕು. ಆದರೆ, ಶಾಸಕರ ಬಂಡಾಯ ತಣಿಸುವುದಕ್ಕೆ,

- Advertisement - 

ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿನ ಬೇಗುದಿಯನ್ನು ಕಡಿಮೆ ಮಾಡಲು ಸಿಎಂ, ಡಿಸಿಎಂ ಅವರಿಗೆ ಸಮಯವೇ ಸಾಲುತ್ತಿಲ್ಲ. ಇದನ್ನು ನಾನು ತಪ್ಪೆನ್ನಲಾರೆ. ಆದರೆ, ಪಾಲಿಕೆ ನೌಕರರು ಎಸಗಿದ ಪಾಪವೇನು?

ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿಳಂಬ ಧೋರಣೆ ಯಾಕೆ? ಸ್ವತಃ ಮುಖ್ಯಮಂತ್ರಿ ಅವರೇ ಮಾನವೀಯ ನೆಲೆಗಟ್ಟಿನಲ್ಲಿ ತಕ್ಷಣವೇ ಕ್ರಮ ವಹಿಸುತ್ತಿಲ್ಲ, ಏಕೆ? ಹಗಲಿರುಳು ಜನರಿಗಾಗಿ ದುಡಿಯುವ ಅವರ ಬದುಕಿಗೂ ಗ್ಯಾರಂಟಿ ಕೊಡಬೇಕಲ್ಲವೇ? ಎಂದು ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

- Advertisement - 

ಪಾಲಿಕೆಗಳ ನಿತ್ಯದ ಯಾವ ಕೆಲಸ ಕಾರ್ಯಗಳು ನಿಲ್ಲಬಾರದು. ಸ್ವಚ್ಛತೆ, ನೈರ್ಮಲ್ಯ ಹಾಗೂ ಸ್ಥಳೀಯ ಆಡಳಿತದ ದೃಷ್ಟಿಯಿಂದ ಪಾಲಿಕೆಗಳು ಮಹತ್ವ ಹೊಂದಿವೆ ಎಂಬುದನ್ನು ಆಡಳಿತಗಾರರು ಮರೆಯಬಾರದು ಎಂದು ಅವರು ಆಗ್ರಹಿಸಿದರು.

Share This Article
error: Content is protected !!
";