ಸಾಮಾಜಿಕ ಸಮಾನತೆ ಉಂಟು ಮಾಡಲು ಸಾಕ್ಷರತೆ ತುಂಬಾ ಉಪಯುಕ್ತ :ಬಿಇಓ

News Desk

ಚಂದ್ರವಳ್ಳಿ ನ್ಯೂಸ್, ಮಧುಗಿರಿ:
ಸಾಮಾಜಿಕ ಸಮಾನತೆಯನ್ನು ಉಂಟು ಮಾಡಲು ಸಾಕ್ಷರತೆ ತುಂಬಾ ಉಪಯುಕ್ತವಾದ್ದುದೆಂದು  ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ಅಭಿಪ್ರಾಯಪಟ್ಟರು.

ಮಧುಗಿರಿ ತಾಲೂಕು ಪಂಚಾಯತ್ ಆವರಣದಲ್ಲಿ ಸೆಪ್ಟೆಂಬರ್ 8 ಹಾಗೂ 9ರಂದು ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯೆ  ಕಲಿತು ಎಲ್ಲರಿಗೂ ಕಲಿಸಬೇಕು. ಸಾಕ್ಷರತೆಯಿಂದ ಅನಕ್ಷರಸ್ಥರಲ್ಲಿ ಸ್ವಾವಲಂಬನೆ ಹೆಚ್ಚುತ್ತದೆ, ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡುತ್ತದೆ. ಆದ್ದರಿಂದ ದೇಶಕ್ಕಾಗಿ ಸಾಕ್ಷರತೆ ಹೆಚ್ಚಿನ ಪ್ರಮಾಣ ಮಾಡಿದರೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಜಿಲ್ಲಾ ಶಿಕ್ಷಣಾಧಿಕಾರಿ ನರಸಿಂಹಯ್ಯ ಮಾತನಾಡಿ, ನಮ್ಮ ದೇಶ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಅನಕ್ಷರತೆ ಒಂದು ಸಾಮಾಜಿಕ ಪಿಡುಗು. ಜನರಲ್ಲಿ ಅಸಮಾನತೆಯನ್ನು ಉಂಟು ಮಾಡಿದೆ. ಆರ್ಥಿಕ ಅಭಿವೃದ್ಧಿಗೆ ಇದು ಮಾರಕವಾಗಿದೆ. ಸಮಾಜದ ಎಲ್ಲಾ ವರ್ಗದ ಜನರನ್ನು ಸಂಪೂರ್ಣ ಸಾಕ್ಷರನ್ನಗಿಸುವ ಮೂಲಕ ರಾಷ್ಟ್ರದ ಸರ್ವೋತಮುಖ ಅಭಿವೃದ್ಧಿಗೆ ಶ್ರಮಿಸೋಣ ಎಂದು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದ ಸಹಾಯಕ ಅಧಿಕಾರಿ ವಿ. ಅರವಿಂದ್ ಸಾಕ್ಷರತಾ ಪ್ರಮಾಣ ವಚನ ಬೋಧಿಸಿದರು. ಬಿಆರ್ಬಿ ನರಸಿಂಹಮೂರ್ತಿ ಅವರು ಎಲ್ಲರನ್ನೂ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ  ಡಯಟ್  ಅಧಿಕಾರಿಗಳು ಹಾಗೂ ಉಪನ್ಯಾಸಕರು, ಸಮುದಾಯದವರು, ತಾಲೂಕು ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಸಿಆರ್ ಪಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. 

ಸಾಕ್ಷರತಾ ಪ್ರಮಾಣ ವಚನ ಸ್ವೀಕಾರ-ಸಾಕ್ಷರತಾ ಕಾರ್ಯಕ್ರಮಗಳು ಕರ್ನಾಟಕವನ್ನು ಸಾಕ್ಷರ ಸಮೃದ್ಧ, ಸುಸ್ಥಿರ ಮತ್ತು ಅಭಿವೃದ್ಧಿ ನಾಡನ್ನಾ ಗಿಸುವ ಮಹತ್ವಾಕಾಂಕ್ಷಿ ಕಾರ್ಯ ಕ್ರಮಗಳು ಎಂಬುದನ್ನು ಮನವರಿಕೆ ಮಾಡಿಕೊಂಡಿದ್ದೇನೆ, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರ ಮನೆ ಹಾಗೂ ಮನವನ್ನು ತಲುಪಿ, ಮಹಿಳೆ ಮತ್ತು ಶಿಕ್ಷಣ ವಂಚಿತ ವರ್ಗದವರ ಕಲಿಕೆಗಾಗಿ ಕಾರ್ಯಕ್ರಮವು ಜನಾಂದೋಲನ ಗೊಳ್ಳಲು ಕಾಯಾ ವಾಚಾ ಮನಸಾ ಪಾಲ್ಗೊಂಡು ಸೇವೆ ಸಲ್ಲಿಸುವ ಸಂಕಲ್ಪ ಮಾಡಿಕೊಂಡಿದ್ದೇನೆ, ಅನಕ್ಷರಸ್ಥರೆ ಲ್ಲರೂ ಅಕ್ಷರ ಕಲಿತು ಸಾಕ್ಷರಸ್ತರಾಗಿ ಕೌಶಲಾಭಿವೃದ್ಧಿ ಹೊಂದಲು ಹಾಗೂ ಕಲಿಯುತ್ತಿರುವ ಸಮಾಜದ ನಿರ್ಮಾಣಕ್ಕಾಗಿ ನಾನು ಕಲಿತ ಋಣ ಕಲಿಸಿ ತೀರಿಸುತ್ತೇನೆಂದು ಪ್ರಮಾಣೀಕರಿಸುತ್ತೇನೆ ಎಂದು ಪ್ರಮಾಣ ವಚನ ಬೋಧಿಸಲಾಯಿತು.

 

- Advertisement -  - Advertisement - 
Share This Article
error: Content is protected !!
";