ವಿದೇಶಿ ಉನ್ನತ ವ್ಯಾಸಂಗಕ್ಕೆ ಸಾಲ ಸೌಲಭ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಉತ್ತರ ಜಿಲ್ಲೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ ವತಿಯಿಂದ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು

ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪಸ್ಟ್ ಡಾಕ್ಟಲ್ & ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಟರ್ & ಅಲೈಡ್ ಸೈನ್ಸಸ್/ ಟೆಕ್ನಾಲಜಿ, ಮೆಡಿಸಿನ್, ಹುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2, 3 & 3ಬಿ ಸ ಸೇರಿದವರಿಗೆ ಸಾಲ ಸೌಲಭ್ಯ ಒದಗಿಸಲಾಗುವುದು.

- Advertisement - 

ಸಾಲ ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 15.00 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೇಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. ಕ್ಯೂ.ಎಸ್. ವಿಶ್ವ ರ್ಯಾಂಕಿಂಗ್ 1000 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರದೇಶ ಪಡೆದಿರಬೇಕು, ವಾರ್ಷಿಕ ಗರಿಷ್ಟ 25.00 ಲಕ್ಷ ಹಾಗೂ ಪೂರ್ಣ ಕೋರ್ಸ್ ಅವಧಿಗೆ 50.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.
ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ /ಪಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು.

ಅರ್ಜಿಯ ಜೋತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ ವಿದ್ಯಾರ್ಥಿಯ ವಿಸಾ ಪಾಸ್ ಪೆÇೀರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು. ಸ್ನಾತಕೋತ್ತರ ಕೊರ್ಸಗಳಿಗೆ ವಯೋಮಿತಿ 32, ಪಿ.ಎಚ್.ಡಿ ಕೊರ್ಸಗಳಿಗೆ 35 ವರ್ಷಗಳ ವಯೋಮಿತಿಗಳೊಳಗಿರಬೇಕು.

- Advertisement - 

ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು ಆಧಾರ ಕಾರ್ಡನಲ್ಲಿರುವಂತೆ. ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯು ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರಿಗೆ ಅರ್ಜಿಗಳನ್ನು ಅನ್ ಲೈನ್ https://www.sevasindu.karnataka.gov.in ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ್ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://www.dbcdc.karnataka.gov.in ಇಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share This Article
error: Content is protected !!
";