ಭ್ರಷ್ಟ ಅಧಿಕಾರಿಗಳ ಮನೆ ಕಚೇರಿಗಳ ಮೇಲೆ ಲೋಕಾ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ಶಾಕ್ ನೀಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಒಟ್ಟು 12 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಮಾಜಿ ನಿರ್ದೇಶಕಿ ಸುಮಂಗಲಿ ಅವರ ನಿವಾಸದ ಮೇಲೆ
20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

- Advertisement - 

ಸುಮಂಗಲಿ ಅವರು ಸದ್ಯ ಅಮಾನತಿನಲ್ಲಿದ್ದರೂ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಅವರ ಮೇಲಿದೆ. ಇದೇ ರೀತಿ, ಮಲ್ಲಸಂದ್ರ ಏರಿ ಆಸ್ಪತ್ರೆಯ ವೈದ್ಯಾಧಿಕಾರಿ ಮಂಜುನಾಥ್ ಅವರ ಅನ್ನಪೂರ್ಣೇಶ್ವರಿ ನಗರದ ಮನೆ ಮೇಲೆ ಸುಮಾರು 10ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಸರ್ವೇಯರ್ ಗಂಗಾ ಮರಿಗೌಡ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ಶೋಧ ಕಾರ್ಯ ಪ್ರಗತಿಯಲ್ಲಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದರ ಬಗ್ಗೆ ಸಾಕಷ್ಟು ದೂರುಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ದಾವಣಗೆರೆ ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳ ಆಸ್ತಿ ಪಾಸ್ತಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

- Advertisement - 

ಕೆಆರ್​ಐಡಿಎಲ್ ಸಹಾಯಕ ಅಭಿಯಂತರ ಜಗದೀಶ್ ನಾಯ್ಕ್ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಎಸ್​ಡಿಎ ನಡುವಿನಮನೆ ಎಂಬ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.‌

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಎಸ್​ಡಿಎ ನಡುವಿನಮನೆ ಮೇಲೆ ದಾಳಿ ಮಾಡಿ ದಾವಣಗೆರೆಯ ಸರಸ್ವತಿ ನಗರದಲ್ಲಿರುವ ಮನೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಲೋಕಾಯುಕ್ತ ಇನ್​ಸ್ಪೆಕ್ಟರ್ ಸರಳಾ ಅವರು ಬೆಳಗ್ಗೆಯಿಂದಲೇ ನಡುವಿನಮನೆ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಲೋಕಾಯುಕ್ತ ಎಸ್​ಪಿ ಕೌಲಾಪುರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಆರ್​ಐಡಿಎಲ್ ಸಹಾಯಕ ಇಂಜಿನಿಯರ್ ಜಗದೀಶ್ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಮನೆಗಳ ಮೇಲೂ ದಾಳಿ ನಡೆದಿದೆ.

ದಾವಣಗೆರೆಯಲ್ಲಿ ಎಪಿಎಂಸಿ ಬಳಿ ಇರುವ ಕಚೇರಿ ಮೇಲೆ ದಾಳಿ ಮಾಡಲಾಗಿದೆ.‌ಜಗದೀಶ್ ನಾಯ್ಕ್ ಅವರು ಸರ್ಕಾರಿ ಕರ್ತವ್ಯಕ್ಕೆ ಸೇರಿ, ಇದುವರೆಗೆ ಆದಾಯಕ್ಕಿಂತ ಹೆಚ್ಚಿನ ಸ್ಥಿರ ಮತ್ತು ಚರ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂದು ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಶಿವಮೊಗ್ಗದ ನವಲೆ ಬಡಾವಣೆಯ ಶಿವನಗರದ ಈಶ ವಾಸದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದೇ ರೀತಿ ಶಿವಮೊಗ್ಗದ ಕೃಷಿ ನಗರದ ಅನುಸೂಯ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ.

 

Share This Article
error: Content is protected !!
";