ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಇತರೆ ಸ್ಥಳಗಳ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾನಿ ಮಾಡಿ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.

- Advertisement - 

ಆದಾಯಕ್ಕಿಂತ ಹೆಚ್ಚುವರಿ ಅಕ್ರಮ ಸಂಪತ್ತುಗಳಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಲಾಗಿದೆ ಎಂದು ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ತಿಳಿಸಿದ್ದಾರೆ.

ದಾಳಿಗೆ ಒಳಗಾದ ಅಧಿಕಾರಿಗಳು:
ಬೆಂಗಳೂರು (ಎಲೆಕ್ಟ್ರಾನಿಕ್ ಸಿಟಿ) – RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ. ಮಂಡ್ಯ – ನಗರ ಪಾಲಿಕೆ CAO ಪುಟ್ಟಸ್ವಾಮಿ. ಬೀದರ್ – ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್. ಮೈಸೂರು – ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್​ಪೆಕ್ಟರ್ ರಾಮಸ್ವಾಮಿ ಸಿ. ಧಾರವಾಡ – ಕರ್ನಾಟಕ ವಿವಿಯ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ. ಧಾರವಾಡ – ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್. ಶಿವಮೊಗ್ಗ – SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್. ದಾವಣಗೆರೆ – APMC ಸಹ ನಿರ್ದೇಶಕ ಪ್ರಭು ಜೆ.. ಮೈಸೂರು – ಮಡಿಕೇರಿ PWD, ಸ.ಅ. ಇಂಜಿನಿಯರ್ ಗಿರೀಶ್ ಡಿ.ಎಂ. ಹಾವೇರಿ – ಶೇಕಪ್ಪ, ಇಇ, ಯೋಜನಾ ನಿರ್ದೇಶಕ ಕಚೇರಿ ಹಾವೇರಿ.
ಮಂಡ್ಯದಲ್ಲಿ ದಾಳಿ: ಮಂಡ್ಯದಲ್ಲಿ ಏಕಕಾಲಕ್ಕೆ ಪ್ರತ್ಯೇಕ ತಂಡವಾಗಿ ಮೂರು ಕಡೆ ಲೋಕಾ ಆಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು. ಮಂಡ್ಯ ನಗರಸಭೆ ಸಂಯೋಜನಾಧಿಕಾರಿ ಪುಟ್ಟಸ್ವಾಮಿ ಅವರಿಗೆ ಸೇರಿದ್ದು ಎನ್ನಲಾದ ಸ್ವಗ್ರಾಮ ತೊರೆಚಾಕನಹಳ್ಳಿಯ ಮನೆ ಹಾಗೂ ಆಲೆಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರು, ಪರಿಶೀಲನೆ ನಡೆಸಿದರು.

- Advertisement - 

ಮಂಡ್ಯ ನಗರಸಭೆಗೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳ ತಂಡ, ಪುಟ್ಟಸ್ವಾಮಿ ಕರ್ತವ್ಯ ನಿರ್ವಹಿಸುತ್ತಿರುವ ನಗರಸಭೆ ಕಚೇರಿ ಮೇಲೂ ದಾಳಿ ನಡೆಸಿದೆ. ಕಚೇರಿಯಲ್ಲಿ ಪುಟ್ಟಸ್ವಾಮಿಗೆ ಸಂಬಂಧಿಸಿದ ಕಡತ, ವ್ಯವಹಾರದ ದಾಖಲೆ, ಪತ್ರಗಳ ಪರಿಶೀಲನೆ ನಡೆಸಿದೆ. ಪುಟ್ಟಸ್ವಾಮಿಗೆ ಸಂಬಂಧಿಸಿದ ಒಟ್ಟು 5 ಕಡೆ ಪ್ರತ್ಯೇಕ ತಂಡಗಳಾಗಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ. ಸುಭಾಶ ಚಂದ್ರ ನಾಟೀಕರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ನಾಟೀಕರ್ ಕವಿವಿ ಪ್ರಾಧ್ಯಾಪಕರಾಗಿದ್ದು, ಗಳಿಕೆಗಿಂತ ಹೆಚ್ಷಿನ ಆಸ್ತಿ ಹೊಂದಿರುವ ಆರೋಪದ ಮೇಲೆ ನಗರದ ಯಾಲಕ್ಕಿ ಶೆಟ್ಟರ್ ಬಡಾವಣೆಯಲ್ಲಿನ ಅವರ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಒಟ್ಟು ಐದು ಕಡೆಗಳಲ್ಲಿ ದಾಳಿ ಮಾಡಿದ್ದು, ಕರ್ನಾಟಕ ವಿವಿ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್, ಕವಿವಿ ಅಂಬೇಡ್ಕರ್ ಸ್ಟಡೀಸ್ ಸಂಯೋಜಕರಾಗಿ ನಾಟೀಕರ್ ಕೆಲಸ ಮಾಡುತ್ತಿದ್ದಾರೆ.

ಯಾಲಕ್ಕಿ ಶೆಟ್ಟರ್ ಕಾಲೋನಿಯಲ್ಲಿನ ಮನೆ, ಕವಿವಿ ಸಮಾಜಶಾಸ್ತ್ರ ವಿಭಾಗ, ಅಂಬೇಡ್ಕರ್ ಸ್ಟಡೀಸ್, ಕೊಪ್ಪಳದಲ್ಲಿಯ ಮನೆ, ವಿಜಯಪುರ ಜಿಲ್ಲೆಯ ತಾಳಿಕೋಟೆಯ ಸ್ವಂತ ಮನೆಯ ಮೇಲೆ ದಾಳಿ ಮಾಡಿದ್ದಾರೆ.
ಪ್ರೊ.ಸುಭಾಷ ಅವರ ತಮ್ಮನ ಮದುವೆ ದಿನವೇ ಲೋಕಾಯುಕ್ತರು ಶಾಕ್ ನೀಡಿದ್ದು, ಧಾರವಾಡದ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯುತ್ತಿದೆ. ಮದುವೆಗೆಂದು ಎಲ್ಲರು ಆಗಮಿಸಿದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ದಾಳಿ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ವಿರೂಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಲಕ್ಷ್ಮೀಪತಿ ಅವರು ಹಾಲಿ ವಾಸ ಇರುವ ಸಿಮ್ಸ್ ಮೆಡಿಕಲ್ ಕಾಲೇಜಿನ ವಸತಿ ಗೃಹ, ಶಿವಮೊಗ್ಗದ ಜೆ.ಹೆಚ್.ಪಟೇಲ್ ಬಡಾವಣೆಯ ಮನೆ ಹಾಗೂ ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಇಂದಿರಾ ಬಡಾವಣೆಯಲ್ಲಿನ ಮನೆ ಹಾಗೂ ಸಿಮ್ಸ್ ಮೆಡಿಕಲ್ ಕಾಲೇಜಿನ ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲಕ್ಷ್ಮೀಪತಿ ಅವರು ಕಳೆದ 15 ವರ್ಷಗಳಿಂದ ಸೇವೆಯಲ್ಲಿದ್ದಾರೆ. ಇವರು ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಗೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ‌ನಡೆಸಿದ್ದಾರೆ.‌ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ನೇತೃತ್ವದ ನಾಲ್ಕು ತಂಡಗಳು ದಾಳಿ‌ನಡೆಸಿವೆ.

ಹಾವೇರಿ ದಾಳಿ:
ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ನಿವಾಸದ ಮೇಲೆ ಲೋಕಾಯುಕ್ತರು ದಾಳಿ ಮಾಡಿ ಪರಿಶೀಲಿಸಿದ್ದಾರೆ. ಶೇಖಪ್ಪ ಆದಾಯಕ್ಕಿಂತ ಹೆಚ್ಚುವರಿ ಸಂಪತ್ತು ಗಳಿಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿಗೆ ಸಂಬಂಧಿಸಿದ ಮನೆಗಳು
, ವಾಣಿಜ್ಯ ಸಂಕೀರ್ಣ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

 

 

Share This Article
error: Content is protected !!
";