ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ದೊಡ್ಡ ಶಾಕ್ ನೀಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು ವಶ ಪಡಿಸಿಕೊಂಡು ಅಕ್ರಮ ಆಸ್ತಿ ಸಂಪಾದಿಸಿವರಿಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದ್ದಾರೆ.
ದಾಳಿ ವೇಳೆ, ಅಪಾರ ಪ್ರಮಾಣದ ಚಿನ್ನಾಭರಣ ಕಂಡು ಲೋಕಾಯುಕ್ತ ಅಧಿಕಾರಿಗಳೇ ಬೆಚ್ಚಿಬೀಳುವಂತಾಗಿದೆ.
ಬೆಂಗಳೂರಿನಲ್ಲಿ ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ರೇಡ್ ವೇಳೆ ಕಂಡುಬಂದ ಅಪಾರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣ ನೋಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.
ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ ಅಧಿಕಾರಿಗಳಿಗೆ, ಬೆಚ್ಚಿಬೀಳುವಷ್ಟು ಸಂಪತ್ತು ದೊರೆತಿದೆ.
ದಾಳಿ ವೇಳೆ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಮೌಲ್ಯದ ಚಿನ್ನಾಭರಣ ಕಂಡು ಲೋಕಾಯುಕ್ತ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. 28ಕ್ಕೂ ಹೆಚ್ಚು ಜೊತೆ ಓಲೆ, 23 ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಹಾರ ಪತ್ತೆಯಾಗಿದೆ. ಇದಿಷ್ಟೇ ಅಲ್ಲ, ಕೋಟಿ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೆಸ್, ಚಿನ್ನದ ಉಂಗುರವೂ ಪತ್ತೆಯಾಗಿದೆ.
ಕೆಜಿಗಟ್ಟಲೆ ಬೆಳ್ಳಿ, ಚಿನ್ನಾಭರಣ-
ಕೇವಲ ಬಂಗಾರ ಮಾತ್ರ ಅಲ್ಲದೆ, 500, 200 ರೂ. ಮುಖ ಬೆಲೆಯ 8 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. 8 ಕ್ಕೂ ಹೆಚ್ಚು ದುಬಾರಿ ಬೆಲೆಯ ಬ್ರಾಂಡೆಡ್ ವಾಚ್ಗಳು ಸಿಕ್ಕಿವೆ. ಇನ್ನು ಕೆಜಿಗಟ್ಟಲೆಯ ಬೆಳ್ಳಿ ಸಾಮಾಗ್ರಿಗಳು ಕೂಡ ಪತ್ತೆಯಾಗಿದೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಎಸ್ಪಿ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯ ವೇಳೆ ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೆ ರೇಡ್ ಮಾಡಲಾಗಿದೆ. ಮಹತ್ವದ ದಾಖಲೆಗಳನ್ನ ಪರಿಶೀಲನೆ ಮಾಡಲಾಗಿದೆ.
ಗಣಿ ಅಧಿಕಾರಿ ಮನೆ ಮೇಲೆ ರೇಡ್-
ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಗಣಿ ಅಧಿಕಾರಿ ಕಚೇರಿ, ಮನೆ ಮೇಲೂ ದಾಳಿ ಮಾಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರಿನ ವೆಲೆನ್ಸಿಯಾದ ಮನೆ, ಕಚೇರಿಯಲ್ಲಿ ದಾಖಲೆಗಳನ್ನ ಪರಿಶೀಲನೆ ಮಾಡಿದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದ ಕೃಷ್ಣವೇಣಿ, 2 ತಿಂಗಳ ಹಿಂದಷ್ಟೇ ಮಂಗಳೂರಿಗೆ ಬಂದಿದ್ದರು.
ಕೃಷ್ಣವೇಣಿಗೆ ಸಂಬಂಧಪಟ್ಟ ಮತ್ತಷ್ಟು ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿರುವ ಮನೆ, ಅಪಾರ್ಟ್ಮೆಂಟ್, ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಇನ್ನು ಯಲಹಂಕದಲ್ಲಿರುವ ಅಪಾರ್ಟ್ಮೆಂಟ್ನಲ್ಲೂ ಪರಿಶೀಲನೆ ಮಾಡಲಾಯಿತು.
ಕಾವೇರಿ ನಿಗಮದ ಎಂಡಿ ಮನೆ ಮೇಲೆ ದಾಳಿ-
ಮಂಡ್ಯ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ. ಮಳವಳ್ಳಿಯಲ್ಲಿರೋ ನಿವಾಸದಲ್ಲಿ ದಾಖಲೆಗಳನ್ನ ಪರಿಶೀಲನೆ ಮಾಡಲಾಗಿದೆ.
ಎಂಡಿಮಹೇಶ್, ಪತ್ನಿಗೆ ಸೇರಿದ ಪೆಟ್ರೋಲ್ ಬಂಕ್ ಮೇಲೂ ರೇಡ್ ಮಾಡಲಾಯಿತು. ಆದಾಯಕ್ಕೂ ಮೀರಿ ಆಸ್ತಿಗಳಿಕೆ ದೂರು ಹಿನ್ನೆಲೆ ಮಹತ್ವದ ದಾಖಲೆಗಾಗಿ ಹುಡುಕಾಡಿದ್ದಾರೆ.ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ದೂರು ಬಂದ ಹಿನ್ನೆಲೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಸಿ ಮುಟ್ಟಿಸಿದೆ. ದಾಳಿ ವೇಳೆ ಅಪಾರ ಮೌಲ್ಯದ ಚಿನ್ನಾಭರಣ, ಆಸ್ತಿ ದಾಖಲೆ ಪತ್ತೆಯಾಗಿದೆ. ಅದರಲ್ಲೂ ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಪ್ರಮಾಣ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.