ನೋಂದಣಿ ಅಧಿಕಾರಿಗಳ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯ ನೋಂದಣಿ ಅಧಿಕಾರಿಗಳ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಇದು ಕಂದಾಯ ಇಲಾಖೆಯ ಅಕ್ರಮಗಳು
, ಭ್ರಷ್ಟಾಚಾರ ಮತ್ತು ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ನಡೆದ ದಾಳಿ ಎಂದು ತಿಳಿದುಬಂದಿದೆ. ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

- Advertisement - 

ಏಕಕಾಲಕ್ಕೆ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

- Advertisement - 

ತುಮಕೂರು, ಗುಬ್ಬಿ, ಕುಣಿಗಲ್, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ, ತಿಪಟೂರು ಸಬ್ ರಿಜಿಸ್ಟರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ತುಮಕೂರು ಜಿಲ್ಲೆಯ ಎಲ್ಲಾ ಹತ್ತು ತಾಲೂಕು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದ್ದು, ಈ ಬಗ್ಗೆ ಪರಿಶೀಲನೆ ಮುಂದುವರೆದಿದೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿನಾರಾಯಣ್, ಲೋಪದೋಷಗಳು ಕಂಡುಬಂದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";