ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀಚ್ಚಿಟ್ ನೀಡಿ ಇದು ತನಿಖೆಗೆ ಅರ್ಹವಲ್ಲದ ಪ್ರಕರಣವಾಗಿದೆ ಎಂದು ದೂರುದಾರ ಸ್ನೇಹಮಯಿಕೃಷ್ಣ ಅವರಿಗೆ ತಿಳಿಸಿದ ಬೆನ್ನಲ್ಲೆ ಲೋಕಾಯುಕ್ತ ವರದಿಗೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಲೋಕಾಯುಕ್ತ ಅಧಿಕಾರಿಗಳು ವರದಿ ನಾಳೆ ಕೊಡುತ್ತಿದ್ದು, ಅವರು ಅಧಿಕಾರಿಗಳ ಮೇಲೆ ಗೂಬೆ ಕೂರಿಸುತ್ತಾರೆ. ಸಿಎಂ ಸಿದ್ದರಾಮಯ್ಯನವರ ಕುಟುಂಬದವರು ಮುಗ್ಧರು. ಕ್ಲೀನ್ ಚೀಟ್ ಅಲ್ಲ, ನಿರ್ಮಾ ಪೌಡರ್ ಹಾಕಿ ತೊಳೆದಿದ್ದಾರೆ ಎಂದು ಲೋಕಾಯುಕ್ತ ವರದಿಗೆ ವ್ಯಂಗ್ಯವಾಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್, ಏನು ಇಲ್ಲ ಅಂದ್ರೆ ದುಬಾರಿ ವಕೀಲರನ್ನ ಏಕೆ ಕರೆ ತಂದ್ರಿ? ಹಳ್ಳಿಯ ವಕೀಲರಿಂದ ಕೇಸ್ ಎದುರಿಸಬಹುದಿತ್ತು ಅಲ್ವಾ? ಇದು ಮುಚ್ಚುಹಾಕುವ ಹುನ್ನಾರ. ಪೊಲೀಸ್ ಅಧಿಕಾರಿಗೆ ವರ್ಗಾವಣೆ, ಪ್ರಮೋಷನ್ ಬೇಕು. ಅದಕ್ಕೆ ಹೀಗೆ ಮಾಡಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.
ಇಡೀ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ಕೊಟ್ರೆ ಮಾತ್ರ ಸತ್ಯ ಹೊರಗೆ ಬರುತ್ತೆ. ಇದು ಪೂರ್ವ ನಿಯೋಜಿತವಾದ ವರದಿ. ತಪ್ಪಿಲ್ಲ ಅಂದರೆ 14 ಸೈಟ್ ಯಾಕೆ ವಾಪಸ್ ಕೊಟ್ಟರು? A1, A2, A3 ತಪ್ಪಿಲ್ಲ ಅಂತ ಲೋಕಾಯುಕ್ತ ಹೇಳುತ್ತೆ. ಲೇಔಟ್ ಅಕ್ರಮ, ಅದು ಅವರಿಗೆ ಗೊತ್ತೇ ಇಲ್ಲ ಅಂತಾರೆ. 50:50 ಸೈಟ್ ಬೇಕು ಅಂದಾಗ ಮಾತ್ರ ನೋಡಿದ್ದಾರೆ. ಸಿದ್ದರಾಮಯ್ಯ ಒಂದು ಫೋನ್ ಕಾಲ್ ಕೂಡ ಮಾಡಿಲ್ಲ. ಸಿದ್ದರಾಮಯ್ಯನವರು ಒಂದು ಪತ್ರ ಕೂಡ ಬರೆದಿಲ್ಲ.
ಸಿಎಂ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಳ್ಳೋಕೆಮೂರ್ಖರಾ? ಎಂದು ಅಶೋಕ್ ಖಾರವಾಗಿ ಪ್ರಶ್ನಿಸಿದರು.
ಲೋಕಾಯುಕ್ತ ಬಿ ರಿಪೋರ್ಟ್ನಿಂದ 100% ಬೇಜಾರಾಗಿದೆ. ನಮಗಿಂತ ಜಾಸ್ತಿ 200% ಕಾಂಗ್ರೆಸ್ನ ಕೆಲವರಿಗೆ ಬೇಜಾರು. ಸಿಎಂ ಆಗಬೇಕೆಂಬ ಕನಸು ಇಟ್ಟುಕೊಂಡವರಿಗೆ ನಿದ್ರೆ ಇಲ್ಲ. ಸಿಎಂ ಆಗಬೇಕು ಎಂಬುವವರ ಕನಸು ನುಚ್ಚು ನೂರಾಗಿದೆ. ನಾಳೆ ಬೆಂಗಳೂರಿನಲ್ಲಿ ನಾವು 10 ಜನ ಸಭೆ ಸೇರುತ್ತಿದ್ದೇವೆ. ಸಭೆಯಲ್ಲಿ ಮುಡಾ ಪ್ರಕರಣದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಸಿಬಿಐಗೆ ಕೊಡಲಿ-ಲೋಕಾಯುಕ್ತ ವರದಿ ಬಗ್ಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಮುಡಾ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಮಾಡಿದರೆ ಎಲ್ಲವೂ ಬಯಲಾಗುತ್ತದೆ. ಕಾಂಗ್ರೆಸ್ನವರಿಗೆ ಸಿಬಿಐ ಮೇಲೆ ವಿಶ್ವಾವಿಲ್ಲವೆಂದರೆ ಏನರ್ಥ. ಕಾಂಗ್ರೆಸ್ನವರು ಕೇಂದ್ರದಲ್ಲಿದ್ದಾಗ ನಡೆದ ತನಿಖೆಗಳ ಸ್ಥಿತಿ ಏನು? ಹಾಗಾದರೆ ಕಾಂಗ್ರೆಸ್ನವರು ಸಿಬಿಐ ದುರ್ಬಳಕೆ ಮಾಡಿಕೊಂಡಿದ್ದರಾ? ಮುಡಾ ಅಕ್ರಮದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಲಿದೆ. ಕಾನೂನು ಹೋರಾಟ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿ ಮುಡಾ ತನಿಖೆಯನ್ನು ಸಿಬಿಐಗೆ ಕೊಡಲಿ ಎಂದು ಅವರು ಆಗ್ರಹ ಮಾಡಿದರು.
ಮೈಸೂರಿನವರೆಗೆ ನಾವು ಪಾದಯಾತ್ರೆ ಮಾಡಿದ್ವಿ. ನನಗೂ ಇದಕ್ಕೂ ಸಂಬಂಧ ಇಲ್ಲ ಸಿಎಂ ಹೇಳಿದ್ರು. ಆಮೇಲೆ 14 ಸೈಟ್ ವಾಪಸ್ ಕೊಟ್ಟರು. ಇದೀಗ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ. ಹಾಗಾದ್ರೆ ನ್ಯಾಯ ಯಾರಿಗೆ ಕೊಟ್ಟಿದ್ದಾರೆ? ಇದು ನಮಗೆ ನಿರೀಕ್ಷೆತವೇ. ಯಾವುದೇ ಅನಿರೀಕ್ಷಿತ ಇರಲಿಲ್ಲ. ಸಿಬಿಐಗೆ ಕೊಡದಿದ್ರೆ ಸತ್ಯ ಹೊರಗೆ ಬರಲ್ಲ ಅಂದ್ವಿ. ಇವರು ಧೈರ್ಯ ಇದ್ದಿದ್ದರೆ ಸಿಬಿಐಗೆ ಕೊಡಬೇಕಿತ್ತು. ಸಿಬಿಐ ಕೊಡಬಾರದು ಎಂದು ಕೋರ್ಟ್ ಗೆ ಹೋಗುತ್ತಾರೆ.
ಅತ್ಯುನ್ನತ ಅಡ್ವೋಕೇಟ್ ಗಳನ್ನ ಕರೆಯಿಸಿ ವಾದ ಮಾಡಿಸುತ್ತಾರೆ. 14 ಸೈಟುಗಳಿಗೆ ಎಷ್ಟು ಬೆಲೆ ಇತ್ತು? ಅಷ್ಟೇ ಹಣವನ್ನ ಅಡ್ವೋಕೇಟ್ ಗೆ ಕೊಟ್ಟಿದ್ದಾರೆ. ಅಪಾದನೆಬರುತ್ತಲೇ ರಾಜೀನಾಮೆ ಕೊಡಬೇಕಿತ್ತು. ಮೈಸೂರಿನಲ್ಲೂ ಅವರಿಗೆ ಬೇಕಾದ ಅಧಿಕಾರಿಗಳು ಇರಬಹುದು. ಅದಕ್ಕೆ ಮುಚ್ಚಿಹಾಕುವ ಕೆಲಸ ನಡೆದಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.