ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರಸಿತು” ಎಂಬ ಗಾದೆ ಮಾತಿನಂತಿದೆ ಮುಡಾ ಪ್ರಕರಣದ ಲೋಕಾಯುಕ್ತ ವರದಿ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಗೆ ಲೋಕಾಯುಕ್ತ ಕ್ಲೀನ್‌ಚಿಟ್‌ನೀಡಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಅಂದಿನ ಮೈಸೂರು ಜಿಲ್ಲಾಧಿಕಾರಿ, ಈಗಿನ ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಕುಮಾರನಾಯಕ್ ಅವರು ಕರ್ತವ್ಯಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಸಂಸದ ಕುಮಾರ ನಾಯಕ್‌ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಲೋಕಾಯುಕ್ತರು ಉಲ್ಲೇಖಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬವನ್ನು ರಕ್ಷಿಸಲು ಅಧಿಕಾರಿಗಳಿಂದಲೇ ಎಲ್ಲಾ ತಪ್ಪುಗಳಾಗಿವೆ ಎಂದು “ಸಿದ್ದ” ವರದಿ ನೀಡಿ, ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.