ಹಲಗಲದ್ದಿ ಗ್ರಾಮ ಲೆಕ್ಕಾಧಿಕಾರಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರೈತರೊಬ್ಬರಿಗೆ ಸಂಬಂಧಿಸಿದ ಪ್ರತ್ಯೇಕ ಪಹಣಿ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ರೆಡ್ ಹ್ಯಾಂಡ್ ಆಗಿ ಕಂದಾಯ ಇಲಾಖೆಯ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ನಡೆದಿದೆ.
₹ಆರೋಪಿ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ನಾಗಪ್ಪ ಲಮಾಣಿ ಬಿನ್ ಹನುಮಂತಪ್ಪ ಇವರು ಹಲಗಲದ್ದಿ ರೈತ ಎನ್.ತಿಪ್ಪೇಸ್ವಾಮಿ ಇವರ ಪ್ರತ್ಯೇತ ಪಹಣಿ ಮಾಡಲು 10 ಸಾವಿರಕ್ಕೆ ಬೇಡಿಕೆ ಇಟ್ಟು ಕೊನೆಗೆ 9,000 ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ಮಾಡಿ ಲಂಚದ ಹಣ ಸಮೇತ ಆರೋಪಿ ಅಧಿಕಾರಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಚಿತ್ರದುರ್ಗ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಇವರ ಮಾರ್ಗದರ್ಶನದಲ್ಲಿ ಸಿಪಿಐ ವೈ.ಎಸ್.ಶಿಲ್ಪಾ ಅವರು ಮಂಗಳವಾರ ಕಾರ್ಯಾಚರಣೆ
ನಡೆಸಿ ಆರೋಪಿ ಅಧಿಕಾರಿಯನ್ನು ಹಿರಿಯೂರಿನ ತಾಲ್ಲೂಕು ಕಚೇರಿ ಆವರಣದಲ್ಲೇ ಬಂಧಿಸಿದ್ದಾರೆ.