2 ಲಕ್ಷ ಲಂಚ ಪಡೆಯುವಾಗ ಎಸಿಪಿ, ಎಎಸ್ಐ ಅವರುಗಳನ್ನು ಬಂಧಿಸಿದ ಲೋಕಾಯುಕ್ತರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೈಬರ್ ಕ್ರೈಂ ಪ್ರಕರಣದ ತನಿಖೆ‌ಕೈಗೊಳ್ಳಲು ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಎಸಿಪಿ ಹಾಗೂ ಎಎಸ್ಐ ಅವರುಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆಯ ಎಸಿಪಿ ತನ್ವೀರ್ ಎಸ್.ಆರ್. ಹಾಗೂ ಎಎಸ್ಐ ಕೃಷ್ಣಮೂರ್ತಿ ಅವರುಗಳನ್ನು 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಬಂಧಿಸಲಾಗಿದೆ.

ಏನಿದು ಪ್ರಕರಣ:
ದೂರುದಾರ ಬಿ.ಎಸ್.ಮಧುಸೂದನ್ ಎಂಬವರ ಖಾಸಗಿ ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ
, ಸಾಕಷ್ಟು ಆರ್ಥಿಕ‌ನಷ್ಟವುಂಟು ಮಾಡಲಾಗಿತ್ತು. ಕಂಪನಿಯ ಮಾಜಿ ಉದ್ಯೋಗಿಯೊಬ್ಬ ಕೆಲಸದಿಂದ ತೆಗೆದು ಹಾಕಿದ ಸಿಟ್ಟಿಗೆ ಈ ಕೃತ್ಯ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿ, ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ಮಧುಸೂಧನ್ ದೂರು ನೀಡಿದ್ದರು.

ಆದರೆ ಅನುಮಾನಿತ ಆರೋಪಿಯನ್ನು ವಿಚಾರಣೆ ನಡೆಸಿ ಪ್ರಕರಣದ ತನಿಖೆ ಕೈಗೊಳ್ಳಲು 4 ಲಕ್ಷ ರೂ ಲಂಚಕ್ಕೆ ಆರೋಪಿಗಳು ಬೇಡಿಕೆಯಿಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ಮಧುಸೂದನ್ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಸಂತ್ರಸ್ತರು ನೀಡಿದ ದೂರಿನ ಅನ್ವಯ ಮಂಗಳವಾರ ಸಂಜೆ ಲೋಕಾಯುಕ್ತರು ದಾಳಿ ಕಾರ್ಯಾಚರಣೆ ಕೈಗೊಂಡು ಲಂಚ ಸ್ವೀಕರಿಸುತ್ತಿದ್ದ ಇಬ್ಬರೂ ಪೊಲೀಸ್​ ಅಧಿಕಾರಿಗಳನ್ನು ಲೋಕಾಯುಕ್ತರು
ಬಂಧಿಸಿದ್ದಾರೆ. ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

 

Share This Article
error: Content is protected !!
";