ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ನಾಗದೇನಹಳ್ಳಿ ಬಳಿ ದ್ವಿಚಕ್ರ ವಾಹನಕ್ಕೆ ಲಾರಿಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಹು ರಾಷ್ರೀಯ ಕಂಪನಿ ಫಾಕ್ಸ್ ಕಾನ್‌ಸಮೀಪಇಂದು ಮಧ್ಯಾಹ್ನ ಸುಮಾರು 2 ಗಂಟೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಪಾಲ್ ದಿನ್ನೆ ಗ್ರಾಮದ ರಾಮಯ್ಯನವರ ಮಗ ಚೆನ್ನಕೇಶವ(22) ಮೃತ ದುರ್ದೈವಿ. ಬಹು ರಾಷ್ಟ್ರೀಯ ಪಾಕ್ಸ್ ಕಾನ್ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿಯನ್ನು ಕರೆದುಕೊಂಡು ಬರಲು ಹೋಗಿದ್ಧ ಯುವಕ ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು
ಸ್ಥಳೀಯವಾಗಿ ಪ್ರತಿನಿತ್ಯ ಸಾವಿರಾರು ಕಾರ್ಮಿಕರು ಕರ್ತವ್ಯಕ್ಕಾಗಿ ಸಂಚರಿಸುವ ರಸ್ತೆಯಲ್ಲಿ ಜನ ದಟ್ಟಣೆ ಇರುವ ಈ ರಸ್ತೆಯಲ್ಲಿ ಸೋಂಪುರ ಹೊಸಕೋಟೆ ರಾಷ್ಟೀಯ ಹೆದ್ದಾರಿಯಾಗಿದ್ದು ವಾಹನಗಳು ಅತಿ ವೇಗದಿಂದ ಚಲಿಸುತ್ತವೆ. ಈ ಕುರಿತು ಸಂಬಂಧ ಪಟ್ಟ ಟೋಲ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕಾರ್ಮಿಕರ ಹಾಗೂ ಜನರ ಪ್ರಾಣ ಉಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸದ್ಯ ಮೃತ ದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ವಿಶ್ವನಾಥ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನೆಡೆದಿದೆ.