ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಟೆ ನಗರಿ ಚಿತ್ರದುರ್ಗ ಹಿಂದೂ ಮಹಾಗಣಪತಿ ದೇಶದ ಬಹುದೊಡ್ಡ ಗಣೇಶೋತ್ಸವ ಎಂಬ ಖ್ಯಾತಿ ಪಡೆದಿದೆ. ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಸಂದರ್ಭದಲ್ಲಿ ಧ್ವನಿವರ್ಧಕ(ಡಿಜೆ) ಬಳಕೆಗೆ ಅವಕಾಶ ಕಲ್ಪಿಸುವಂತೆ ಹಾಗೂ
ಶೋಭಾಯಾತ್ರೆ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿಯವರು ಬೆಳಿಗ್ಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಶ್ರೀಗಳ ಮನವಿಗೆ ಸ್ಪಂದಿಸಿದ ಗೃಹ ಸಚಿವರು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ಚಿತ್ರದುರ್ಗದ ಮಾಜಿ ಸಂಸತ್ ಸದಸ್ಯ ಬಿ.ಎನ್ ಚಂದ್ರಪ್ಪ ಇದ್ದರು.

