ಹೊರರಾಜ್ಯಗಳಲ್ಲಿ ಕನ್ನಡ ಉತ್ತೇಜಿಸಲು ಕ್ರಮ-ಮಹಾಲಿಂಗಯ್ಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡ ಅಭಿವೃದ್ಧಿ ಪ್ರಾಧಿಕಾರ  ಕರ್ನಾಟಕದಲ್ಲಿ ಕನ್ನಡ ಭಾಷೆಯ ಅನುಷ್ಠಾನ
, ಅಭಿವೃದ್ಧಿ ಮತ್ತು ರಕ್ಷಣೆಗಾಗಿ ಕಾರ್ಯನಿರ್ವಹಿಸುವ ಸರ್ಕಾರಿ ಸಂಸ್ಥೆಯಾಗಿದೆ. ಇದು ಆಡಳಿತ, ಶಿಕ್ಷಣ ಮತ್ತು ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯನ್ನು ಕಡ್ಡಾಯಗೊಳಿಸಲು, ಸಾಹಿತ್ಯ ಪೋಷಣೆಗೆ ಮತ್ತು ಗಡಿ/ಹೊರನಾಡುಗಳಲ್ಲಿ ಕನ್ನಡವನ್ನು ಉತ್ತೇಜಿಸಲು ಕ್ರಮ ಕೈಗೊಳ್ಳುತ್ತದೆ. ಎಂದು ಕನ್ನಡ ಜಾಗೃತಿ ಸಮಿತಿಯ ಸದಸ್ಯ. ಕೆ ಮಹಲಿಂಗಯ್ಯ ತಿಳಿಸಿದರು.

 ನಗರದ ಕನ್ನಡ ಜಾಗೃತಿ ಪರಿಷತ್ ಸಭಾಂಗಣದಲ್ಲಿ  ಅಯೋಜನೆ  ಮಾಡಲಾದ  ಪೂರ್ವಭಾವಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಜಾಗೃತ ಸಮಿತಿಯ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡಜಾಗೃತ ಪರಿಷತ್ತು ಗಳ ಸಹಯೋಗದಲ್ಲಿ ರಾಜ್ಯದ ಕನ್ನಡ ಭಾಷಾ ಅಭಿವೃದ್ಧಿ ಮತ್ತು ಭಾಷಾ ನೀತಿಯ ಪರಿಣಾಮಕಾರಿ ಅನುಷ್ಠಾನ ಉದ್ದೇಶದಿಂದ ಕನ್ನಡ ಜಾಗೃತಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿ ಸರ್ಕಾರದ ವಿವಿದ ಇಲಾಖೆಗಳು ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ವಲಯದ ಹಲವು  ಹಂತಗಳಲ್ಲಿ ಕನ್ನಡ ಅನುಷ್ಠಾನದ ಕುರಿತು ನಿಗಾ ವಹಿಸಬೇಕಿದೆ ಈ ಹಿನ್ನಲೆಯಲ್ಲಿ ತಾಲೂಕಿನಲ್ಲಿ ತಹಶೀಲ್ದಾರ್‌ನೇತೃತ್ವದಲ್ಲಿ ಕನ್ನಡ  ಸಮಿತಿ ರಚಿಸಲಾಗಿದೆ.

- Advertisement - 

ಕನ್ನಡ ಸಂಘಟನೆಗಳನ್ನು ಒಳಗೊಂಡಂತೆ ಉಪ ಸಮಿತಿ ರಚಿಸಲಾಗಿದ್ದು, ಕೈಗಾರಿಕೆಗಳು, ಖಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ ವಿವಿದೆಡೆ ಕನ್ನಡ ಭಾಷೆಯ ಬಳಕೆ ಹಾಗೂ ಉತ್ತೇ ಜನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಿವರಿಸಿದರು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿ ಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ, ಸದಸ್ಯ ಟಿ.ತಿಮ್ಮೇಶ್ ಸೇರಿ ದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

- Advertisement - 

 ಈ ಸಂದರ್ಭದಲ್ಲಿ ಕನ್ನಡ ಜಾಗೃತ ಪರಿಷತ್‌ಟ್ರಸ್ಟಿ ಕನ್ನಡಪರ ಡಾ.ಎ.ಓ.ಅವಲಮೂರ್ತಿ, ಹೋರಾಟಗಾರ ತ.ನ.ಪ್ರಭುದೇವ್, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವನಾಯಕ್, ಕನ್ನಡ ಜಾಗೃತ ಸಮಿತಿ ಸದಸ್ಯೆ ನಾಗರತ್ನಮ್ಮ, ಕಸಾಪ ಜಿಲ್ಲಾ ಕಾರ್ಯದರ್ಶಿ ಪ್ರೊ.ಕೆ.ಆರ್. ರವಿಕಿರಣ್, ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗರಾಜ್, ಶಿವರಾಜ್, ಕುಮಾರ್‌ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್, ಭಾರತ್ ಸೈಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡಪಕ್ಷ ಅಧ್ಯಕ್ಷ ವೆಂಕಟೇಶ್‌, ಕರವೇ ಅಧ್ಯಕ್ಷ ಹಮಾಮ್ ವೆಂಕಟೇಶ್, ಮತ್ತಿತರರು ಭಾಗವಹಿಸಿದ್ದರು.

 

 

Share This Article
error: Content is protected !!
";