ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ “ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಯಿತು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಪೂಜೆ ಸಲ್ಲಿಸಿದರು.

ಪ್ರಾಂಶುಪಾಲ ಎಂ ಸಿ ಮಂಜುನಾಥ್ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ವಾಲ್ಮೀಕಿ ಜೀವನವನ್ನು ವಿವರಿಸಿದರು.

- Advertisement - 

“ರತ್ನಾಕರ ಎಂಬ ಒಬ್ಬ ಬೇಟೆಗಾರ ನಾರದ ಮುನಿಗಳ ಉಪದೇಶದಿಂದ ಹೇಗೆ ವಾಲ್ಮೀಕಿಯಾಗಿ ಪರಿವರ್ತನೆಯಾದ ನಂತರ ಅವನಿಗೆ ರಾಮಾಯಣದಂತಹ ಮಹಾಕಾವ್ಯ ಬರೆಯಲು ಹೇಗೆ ಸಾಧ್ಯವಾಯಿತು ಎಂದು ಸವಿವರವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಲಾವಣ್ಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಅರುಣ್ ಕುಮಾರ್ ಕೆ ಎಂ, ಶಿಕ್ಷಕರಾದ ಕವಿತ, ಪ್ರಿಯಾಂಕಾ, ಸುಧಾ, ಶಭಾಸುಲ್ತಾನ್ ಮತ್ತು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

- Advertisement - 

 

 

Share This Article
error: Content is protected !!
";