ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ-ಮಹಾತ್ಮಾ ಗಾಂಧೀಜಿ- ಸಿದ್ದರಾಮಯ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾಥೂರಾಮ್ ಗೋಡ್ಸೆ ಎಂಬ ಭಯೋತ್ಪಾದಕನ ಗುಂಡಿಗೆ ಬಲಿಯಾದ ಮಹಾತ್ಮ ಗಾಂಧಿಯವರ ಬಲಿದಾನ ದಿನದ ಸ್ಮರಣೆಯಲ್ಲಿ ಆಚರಿಸುವ ಹುತಾತ್ಮರ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ನಮನ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

- Advertisement - 

ಮಹಾತ್ಮಾಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ.  ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು.

ಪಂಚಾಯತಿಗಳಿಗೆ ಮಹಾತ್ಮಾಗಾಂಧೀಜಿ ಹೆಸರು:
ರಾಜ್ಯದಲ್ಲಿ ಸುಮಾರು 6 ಸಾವಿರ  ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತ್ಮಾಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು.

- Advertisement - 

ಗಾಂಧೀಜಿಯವರ ಕೊಡುಗೆಯನ್ನು ಇಡೀ ದೇಶ ಸ್ಮರಿಸುತ್ತದೆ:
ಇಂತಹ ಮಹಾನ್ ಚೇತನ ಗುಂಡೇಟಿಗೆ ಬಲಿಯಾಗಿ ನಮ್ಮನ್ನ ಅಗಲಿದ್ದಾರೆ. ಅವರ ಅಭಿಮಾನಿಯೊಬ್ಬರು- ಗಾಂಧೀಜಿಯವರು 100 ವರ್ಷ ಬದುಕಬೇಕೆಂದು ಹಾರೈಸಿದ್ದಕ್ಕೆ, ಗಾಂಧೀಜಿಯವರು ‘’ನಾನು 125 ವರ್ಷಗಳು ದೇಶಕ್ಕಾಗಿ ಬದುಕಲಿಚ್ಛಿಸುತ್ತೇನೆಎಂದು ಉತ್ತರಿಸಿದ್ದರು.  ಇಡೀ ದೇಶ ಅವರ ಕೊಡುಗೆಯನ್ನು ಸ್ಮರಿಸುತ್ತದೆ ಎಂದರು.

ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರದ್ದು:
ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಬೋಸರಾಜು, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಸೇರಿ‌ಹಲವು ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

 

Share This Article
error: Content is protected !!
";