ಕಲೆಗೆ ಜಾತಿ, ಭಾಷೆಯ ಹಂಗಿಲ್ಲ- ಮಹೆಬೂಬ್ ಜಿಲಾನಿ ಖುರೇಷಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಲೆಗೆ ಜಾತಿ, ಭಾಷೆ, ಮೇಲು-ಕೀಳು ಎಂಬ ಭಾವವಿಲ್ಲ. ಕಲೆಗೆ ಕಲಿಕೆಯೇ ಮೂಲ ಬೇರು. ಎಲ್ಲ ವರ್ಗಗಳ ಜನರನ್ನು ಒಟ್ಟುಗೂಡಿಸುವ ಶಕ್ತಿ ಕಲೆಗಿದೆ ಎಂದು ಚಿತ್ರದುರ್ಗ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಹೇಳಿದರು.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಯುವಸೌರಭ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾವೆಲ್ಲರೂ ಭಾರತೀಯ ಎಂಬ ಭಾವ ಮೂಡಲಿ”, “ನಮ್ಮಲ್ಲಿರುವ ಭೇದ ಭಾವ ದೂರ ಮಾಡಲಿಎಂಬ ಗೀತೆಯನ್ನು ತಾವೇ ಸ್ವತಃ ಹಾಡುವ ಮೂಲಕ ವಿದ್ಯಾರ್ಥಿಗಳಿಗೆ ಕಲೆ ಮತ್ತು ಸಾಹಿತ್ಯಕ್ಕೆ ಇರುವ ಶಕ್ತಿ ಹಾಗೂ ದೇಶದ ಏಕತೆ ಮತ್ತು ಸಮಾನತೆಯ ಬಗ್ಗೆ ತಿಳಿಸಿದ ಅವರು, ಕಲೆ, ಸಾಹಿತ್ಯ, ಸಂಸ್ಕøತಿ ಉಳಿಸಿ-ಬೆಳೆಸುವ ಹಾಗೂ ಸಂರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.

- Advertisement - 

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಯುವ ಜನತೆಯು ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ಬಲಿಯಾಗದೆ ಹೆಚ್ಚು-ಹೆಚ್ಚು ಓದುವ ಹವ್ಯಾಸ ಹಾಗೂ ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳ ಸದ್ಭಳಕೆ ಮಾಡಿಕೊಂಡು ಉಜ್ವಲ ಜೀವನ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನಾಂಗ ಹೆಚ್ಚಿದ್ದು, ಯುವಕರಿಗೆ, ವಿದ್ಯಾರ್ಥಿಗಳಿಗೆ, ಸಾಂಸ್ಕøತಿಕ ಕಾರ್ಯಕ್ರಮಗಳು ಯುವ ಬೆಳವಣಿಗೆಗೆ ಹಾಗೂ ಸರ್ವತೋಮುಖ ಅಭಿವೃದ್ಧಿಗೆ  ತುಂಬಾ ಪ್ರಮುಖ ಪಾತ್ರ ವಹಿಸುತ್ತವೆ. ಇಂತಹ ಕಾರ್ಯ ಚಟುವಟಿಕೆಗಳು ನಿರಂತರ ಸುಗಮವಾಗಿ ಸಾಗಲಿ ಎಂದು ಶುಭ ಹಾರೈಸಿದರು.

- Advertisement - 

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಶ್ರಮವಹಿಸಿ ಓದಬೇಕು. ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತಾವೇ ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್.ಬಿ. ನರಸಿಂಹಮೂರ್ತಿ ಮಾತನಾಡಿ, ದೇಶ, ನಾಡು, ನುಡಿ ಕಟ್ಟುವಲ್ಲಿ ಶಿಕ್ಷಣ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. ಇಂದಿನ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಕೌಶಲ್ಯ ಅನಾವರಣಗೊಳಿಸಬೇಕು ಎಂದು ಹೇಳಿದರು.

ಯುವಸೌರಭ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚಿತ್ರದುರ್ಗ ನಗರದ ಆಫ್ರಿನ್ ಕೌಸರ್ ಮತ್ತು ತಂಡದವರು ಸುಗಮ ಸಂಗೀತ ಪ್ರಸ್ತುತ ಪಡಿಸಿದರು. ಹೊಸದುರ್ಗದ ಶೆಟ್ಟಿಹಳ್ಳಿ ರುದ್ರಚಾರಿ ಮತ್ತು ತಂಡದವರು ವೀರಗಾಸೆ ಪ್ರದರ್ಶಿಸಿದರು.

ಹಿರಿಯೂರಿನ ನಾಗಶ್ರೀ ಮತ್ತು ತಂಡದವರು ಸಮೂಹ ನೃತ್ಯ ಮಾಡಿದರು, ಹೊಸದುರ್ಗದ ದಿನೇಶ್ ಮತ್ತು ತಂಡದವರು ಡೊಳ್ಳು ಕುಣಿತವನ್ನು ಪ್ರದರ್ಶಿಸಿದರು.

ಮೊಳಕಾಲ್ಮೂರು ನೇರ್ಲಹಳ್ಳಿಯ ಮನೋಜ್ ಮತ್ತು ತಂಡದವರು ಜಾನಪದ ಗೀತೆಗಳನ್ನು ಹಾಡಿದರು. ಚಳ್ಳಕೆರೆ ತಾಲ್ಲೂಕಿನ ನಲಗೇತನಹಟ್ಟಿಯ ಪಿ.ವಿ. ಓಬಳೇಶ್ ಮತ್ತು ತಂಡದವರು ಬಯಲಾಟವನ್ನು ಪ್ರದರ್ಶನ ಮಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ. ಗುರುನಾಥ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕ್ಷೇತ್ರ ಸಮನ್ವಯಾಧಿಕಾರಿ ಈ.ಸಂಪತ್ ಕುಮಾರ್, ಉಪನ್ಯಾಸಕ ವಿ.ಚನ್ನಬಸಪ್ಪ ಸೇರಿದಂತೆ ಮತ್ತಿತರರು ಇದ್ದರು.

 

 

 

 

Share This Article
error: Content is protected !!
";