ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್ ಅವರಿಗೆ ಬಿಡಿಎ ಆಯುಕ್ತ ಹುದ್ದೆಯನ್ನು ಸಮಪ್ರಭಾರ ಜವಾಬ್ದಾರಿವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶದಂತೆ ಅವರು ಬಿಡಿಎ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಿದರು.
ಬಿಡಿಎ ಆಯುಕ್ತ ಎನ್.ಜಯರಾಮ್ ಅವರು ಮೇ 31ರ ಶನಿವಾರ ವಯೋ ನಿವೃತ್ತಿಗೊಂಡಿದ್ದು 1998ರ ಬ್ಯಾಚ್ ಅಧಿಕಾರಿ ಮಣಿವಣ್ಣನ್ ಬಿಡಿಎ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಸದಾಶಿವನಗರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಣಿವಣ್ಣನ್ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಭ ಹಾರೈಸಿದರು.
ನಾವು ಒಟ್ಟಾಗಿ ನಾವೀನ್ಯತೆ, ಸುಸ್ಥಿರತೆ ಮತ್ತು ಸ್ಮಾರ್ಟ್ ಸಿಟಿ ಬೆಳವಣಿಗೆಯ ನಗರವಾದ ಬ್ರ್ಯಾಂಡ್ ಬೆಂಗಳೂರನ್ನು ನಿರ್ಮಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.