ಉಸಿರಾಟ ತೊಂದರೆಯಿಂದ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟ ಸಮಸ್ಯೆಗೆ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ.

- Advertisement - 

ಮಂಗಳವಾರ ಬೆಳಗ್ಗೆ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವೇಳೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಕಾಣಿಸಿಕೊಂಡಿದ್ದರಿಂದಾಗಿ ಅವರು ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ದರು.

ಇದಕ್ಕೂ ಮೊದಲು ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿನ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

- Advertisement - 

ಸಿಎಂ ಭೇಟಿ-
ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಮುಖ್ಯಮಂತ್ರಿಗಳು  ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

 

Share This Article
error: Content is protected !!
";