ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜಿಲ್ಲಾ ಉಸ್ತುವಾರಿ ಸಚಿವರು, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಡಿ ಸುಧಾಕರ್ ರವರ ಆದೇಶದ ಮೇರೆಗೆ ಹಿರಿಯೂರು ನಗರದ ವಾರ್ಡ್ ನಂ.9ರಲ್ಲಿನ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದ ಗೋಡೆಯನ್ನು ಪುನರ್ ನಿರ್ಮಾಣ ಮಾಡಲಾಗುತ್ತದೆ ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಎನ್.ಮಮತಾ ತಿಳಿಸಿದರು.
ಬೀದರ್-ಶ್ರೀರಂಗಪಟ್ಟಣ ರಸ್ತೆ ಅಗಲೀಕರಣ ಸಂದರ್ಭದಲ್ಲಿ ದೇವಸ್ಥಾನದ ಮುಂಭಾಗದಲ್ಲಿನ ಗೋಡೆಯನ್ನು ಹೊಡೆದು ಹಾಕಲಾಗಿದ್ದು ಸದರಿ ಗೋಡೆಯನ್ನು ನಿರ್ಮಾಣ ಮಾಡಲು ನಿರ್ಮಿತಿ ಕೇಂದ್ರದ ಅಭಿಯಂತರರಿಗೆ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಎನ್.ಮಮತಾ, ನಗರಸಭೆ ಮತ್ತು ನಿರ್ಮಿತಿ ಕೇಂದ್ರದ ಅಭಿಯಂತರು ಸ್ಥಳ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಂದ್ರ ನಾಯ್ಕ್, ವಿ.ವಿ.ಪುರ ಗ್ರಾಮಾಂತರ ಪಂಚಾಯಿತಿ ಕಾಂಗ್ರೆಸ್ ಮುಖಂಡ ಭಾನುಪ್ರಕಾಶ್, ದೇವಾಲಯದ ಕಮಿಟಿಯವರಾದ ಕುಮಾರಣ್ಣ, ಕಣ್ಣಪ್ಪ, ಚೇತನ ಹಾಗೂ ಇತರೆ ಮುಖಂಡರುಗಳು, ಸಾರ್ವಜನಿಕರು ಉಪಸ್ಥಿತರಿದ್ದರು.