ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ಕೃಷಿ ಕಾಲೇಜ್‌ಅನ್ನು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಸೇರಿಸದೆ ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ವ್ಯಾಪ್ತಿಯಲ್ಲಿ ಉಳಿಸುವಂತೆ ಹಾಸನ ಜಿಲ್ಲೆಯ ಶಾಸಕರು ಹೆಚ್.ಡಿ. ರೇವಣ್ಣನವರ ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.
ಈ ನಿಯೋಗದಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು, ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ ಪ್ರಕಾಶ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಅವರು ಜೊತೆಯಲ್ಲಿದ್ದರು.