ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಭಾಜನರಾದ ಮಂಗಳಮುಖಿ ಡಾ.ಅರುಂಧತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಹೋರಾಟ ಮಾಡುತ್ತ ಮೇಕೆ
, ಕೋಳಿ ಸಾಕಾಣಿಕೆ ಮೂಲಕ ಸ್ವಾವಲಂಭಿ ಜೀವನ ನಡೆಸುತ್ತಿರುವ ಚಿತ್ರದುರ್ಗದ ಮಂಗಳಮುಖಿ ಡಾ.ಅರುಂಧತಿ ದಲಿತ ವಿದ್ಯಾರ್ಥಿ ಪರಿಷತ್‌ನಿಂದ ಕೊಡಲ್ಪಡುವ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಗಳಮುಖಿಯರಿಗೆ ಎರಡು ಮೇಕೆ, ಐದು ಕೋಳಿಗಳನ್ನು ಉಚಿತವಾಗಿ ನೀಡಿ ಸ್ವಾವಲಂಭಿಯಾಗಿ ಬದುಕು ಕಟ್ಟಿಕೊಳ್ಳುವಂತೆ ಪ್ರೇರೇಪಿಸುತ್ತಿರುವ ಡಾ.ಅರುಂಧತಿರವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು.

ಜ.೩ ರಂದು ವಿಜಯಪುರದ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಸಂಘಟಕರು ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";