ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಪುಸ್ತಕ ಪ್ರಾಧಿಕಾರದ “ಮನೆಗೊಂದು ಗ್ರಂಥಾಲಯ” ಚಿತ್ರದುರ್ಗ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರನ್ನಾಗಿ ಬಿ.ಎಸ್.ಮಂಜಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.
“ಮನೆಗೊಂದು ಗ್ರಂಥಾಲಯ” ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅದರಂತೆ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಚಿಕ್ಕೋಬನಹಳ್ಳಿ ಚಿಕ್ಕುಂತಿ ಗ್ರಾಮದ ಬಿ.ಎಸ್.ಮಂಜಣ್ಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ತಿಳಿಸಿದ್ದಾರೆ.

