ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮನಮೋಹನ ಸಿಂಗ್ ಅವರನ್ನು ಹೊರತುಪಡಿಸಿ ಒಬ್ಬ ಅರ್ಥಶಾಸ್ತ್ರಜ್ಞನಾಗಿ ಅರ್ಥವ್ಯವಸ್ಥೆಯ ಎಲ್ಲಾ ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸಿದ ಇನ್ನೊಬ್ಬ ಅರ್ಥಶಾಸ್ತ್ರಜ್ಞನನ್ನು ಭಾರತ ಮಾತ್ರವಲ್ಲ ವಿಶ್ವವೇ ಕಂಡಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.
ಅರ್ಥಶಾಸ್ತ್ರದ ಪ್ರಾಧ್ಯಾಪಕ, ಪ್ರಧಾನಮಂತ್ರಿಯ ಆರ್ಥಿಕ ಸಲಹೆಗಾರ, ಕೇಂದ್ರ ವಿತ್ತ ಕಾರ್ಯದರ್ಶಿ, ರಿಸರ್ವ್ ಬ್ಯಾಂಕ್ ಗವರ್ನರ್, ಯೋಜನಾ ಆಯೋಗದ ಉಪಾಧ್ಯಕ್ಷ, ಸೌತ್-ಸೌತ್ ಕಮಿಷನ್‌ಅಧ್ಯಕ್ಷ, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ, ನಂತರ ಕೇಂದ್ರ ವಿತ್ತ ಸಚಿವ,
ಕೊನೆಗೆ ಎರಡು ಅವಧಿಗೆ ದೇಶದ ಪ್ರಧಾನ ಮಂತ್ರಿ! ಹೀಗೆ ಎಲ್ಲಾ ಉನ್ನತ ಹುದ್ದೆಗಳನ್ನು ಅಲಂಕರಿಸಿಯೂ ನಿಗರ್ವಿಯಾಗಿ ಉಳಿದು ನಿರ್ಗಮಿಸಿದ ‘ಮನಮೋಹನ ಸಿಂಗ್‘ ಸಾರ್ಥಕ ಬದುಕನ್ನು ಕಂಡ ಅರ್ಥಮಾಂತ್ರಿಕ ಎಂದು ಕಾಂಗ್ರೆಸ್ ಬಣ್ಣಿಸಿದೆ.