ದೇಶದ ಆರ್ಥಿಕತೆಗೆ ಮನಮೋಹನ ಸಿಂಗ್ ನೀಡಿದ ಕೊಡುಗೆ ಅಪಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ
, ಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಗೌರವಪೂರ್ವಕ ನಮನಗಳನ್ನು ಸಲ್ಲಿಸಿ ಉಪಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಮಾತನಾಡಿದರು.

ದೇಶದ ಆರ್ಥಿಕತೆಗೆ ಮನಮೋಹನ ಸಿಂಗ್ ಅವರು ನೀಡಿದ ಕೊಡುಗೆ ಅಪಾರ. ಹಲವಾರು ಶಾಸನಬದ್ಧ ಕಾರ್ಯಕ್ರಮಗಳ ಮೂಲಕ ಅವರು ದೇಶದ ಪ್ರಗತಿಗೆ ಶ್ರಮಿಸಿದ್ದಾರೆ. ಆಹಾರ ಭದ್ರತಾ ಕಾಯ್ದೆ, ನರೇಗಾ ಯೋಜನೆ, ಆರ್‌ಟಿಇ, ಆರ್‌ಟಿಐ ಸೇರಿದಂತೆ ಅನೇಕ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿವೆ.

ದೇಶದ ಬಡವರು ನೀರುದ್ಯೋಗಿಗಳ ಪರವಾಗಿ ಅವರು ಕೆಲಸ ಮಾಡಿದ್ದಾರೆ. ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದ ಮನಮೋಹನ ಸಿಂಗ್ ಅವರ ಅಗಲಿಕೆಯಿಂದ ಇಡೀ ದೇಶಕ್ಕೆ ನಷ್ಟವಾಗಿದ್ದು,

ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಬದುಕು ಹಾಗೂ ಅವರು ಮಾಡಿದ ಕೆಲಸಗಳು ನಮಗೆ ಸದಾ ಪ್ರೇರಣೆಯಾಗಿವೆ ಎಂದು ಶಿವಕುಮಾರ್ ತಿಳಿಸಿದರು.

 

 

- Advertisement -  - Advertisement - 
Share This Article
error: Content is protected !!
";