ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಮನ್ ಕೀ ಬಾತ್ ವೀಕ್ಷಣೆಯಲ್ಲಿ ಅಗ್ರಸ್ಥಾನ ತಲುಪುವ ಸಂಕಲ್ಪ” ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ “ಮನ್ ಕೀ ಬಾತ್” ವಿಶೇಷ ಸಭೆಯನ್ನು ಉದ್ಘಾಟಿಸಲಾಯಿತು.
ಪ್ರಧಾನಿಗಳ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ನಮ್ಮೆಲ್ಲ ಕಾರ್ಯಕರ್ತರ ಪರಿಶ್ರಮದಿಂದ ದೇಶದಲ್ಲಿ ರಾಜ್ಯವು ನಾಲ್ಕನೇ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಅಗ್ರಸ್ಥಾನಕ್ಕೇರುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಮಂಡಲ ಹಾಗೂ ಬೂತ್ ಮಟ್ಟದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಮನ್ ಕೀ ಬಾತ್ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸುವ ಕುರಿತು ಚರ್ಚಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಉಪಾಧ್ಯಕ್ಷೆ ಮಾಳವಿಕಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಮನ್ ಕೀ ಬಾತ್ ಸಂಚಾಲಕರು, ಸಹ ಸಂಚಾಲಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

