ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಡವರ ಹಕ್ಕಿನ ಸಂಗ್ರಾಮ – ಮನರೇಗಾ ಬಚಾವೋ ಸಂಗ್ರಾಮ ಮನರೇಗಾ ಯೋಜನೆಯನ್ನು ಉಳಿಸಲು ಹಾಗೂ ಪಂಚಾಯತ್ ಚುನಾವಣೆಗಳ ಕಾರ್ಯತಂತ್ರ ರೂಪಿಸಲು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಗಾಯತ್ರಿ ವಿಹಾರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು ಹಾಗೂ ಪಕ್ಷದ ಮುಖಂಡರೊಂದಿಗೆ ಭಾಗವಹಿಸಿದ್ದರು.
ಮನರೇಗಾ ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಯಿತು. ಆದರೆ ಈಗ ಮಹಾತ್ಮ ಗಾಂಧಿಯವರ ಹೆಸರಿನ ಕಾಯ್ದೆ ಬದಲಾವಣೆ ಮಾಡಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಮಹಾತ್ಮ ಗಾಂಧಿಯವರನ್ನು ಎರಡನೇ ಬಾರಿ ಕೊಲೆ ಮಾಡುತ್ತಿದ್ದಾರೆ.
ಈ ಯೋಜನೆಯಡಿ ಕೇಂದ್ರ ಸರ್ಕಾರ 60% ಅನುದಾನ, ರಾಜ್ಯಗಳು 40% ಅನುದಾನ ನೀಡಬೇಕು. ಇದನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಸಮರಕ್ಕೆ ಮುಂದಾಗಿದೆ. ವಿಶೇಷ ಅಧಿವೇಶನ ಕರೆದು ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಳಿದರು.
ಈ ಕಾಯ್ದೆಯಲ್ಲಿ ಇರುವುದು ದಶರಥ ಪುತ್ರ ರಾಮನೂ ಅಲ್ಲ, ಕೌಸಲ್ಯಾ ರಾಮನೂ ಅಲ್ಲ. ನಾಥೂರಾಮ. ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದು ಮಾಡುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.
ಪ್ರಧಾನಮಂತ್ರಿ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಲ್ಲಿ ರೂ.1,12,000 ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಖಜಾನೆಯಲ್ಲಿ ಹಣವಿಲ್ಲದಿದ್ದರೆ ಇಂದು 680 ಕೋಟಿ ರೂ.ಗಳ ಯೋಜನೆಗೆ ಚಾಲನೆ ನೀಡಲು ಸಾಧ್ಯವಾಗುತ್ತಿರಲಿಲ್ಲ.
ಸೇಡಂ ನಲ್ಲಿ 73 ಕೋಟಿ ರೂ. ಗಳ ವೆಚ್ಚದಲ್ಲಿ ಜಿಟಿಟಿಸಿ ಕೇಂದ್ರ ಸ್ಥಾಪನೆಯಾಗುತ್ತಿದೆ. ಇಲ್ಲಿ ತರಬೇತಿ ಪಡೆದವರಿಗೆ ನೂರಕ್ಕೆ ನೂರರಷ್ಟು ಕೆಲಸ ದೊರಕುತ್ತದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ 4 ಜಿಟಿಟಿಸಿ ಸ್ಥಾಪಿಸಿದ್ದರೆ, ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ 10 ಜಿಟಿಟಿಸಿ ಪ್ರಾರಂಭ ಮಾಡಿದ್ದೇವೆ. ನಮ್ಮ ಸರ್ಕಾರ ಎಲ್ಲರನ್ನೂ ಒಳಗೊಂಡಿರುವ ಸರ್ಕಾರ. ಎಲ್ಲರ ಅಭಿವೃದ್ಧಿಯೇ ನಾಡಿನ ಅಭಿವೃದ್ಧಿ ಎಂದು ನಂಬಿ, ಅದರಂತೆ ನಡೆಯುತ್ತಿದ್ದೇವೆ ಎಂದು ತಿಳಿಸಿದರು.
ಜೂನ್ ಅಂತ್ಯದ ವೇಳೆಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನಾದೇಶ ನೀಡಿದ್ದು ಈಗಿನಿಂದಲೇ ಚುನಾವಣಾ ಸಿದ್ಧತೆಗಳನ್ನು ಮಾಡಿಕೊಳ್ಳಲು, ಗೆಲುವಿನ ಕಾರ್ಯತಂತ್ರ ರೂಪಿಸುವ ಕುರಿತು ಗಂಭೀರ ಚರ್ಚೆ ಮಾಡಲಾಯಿತು.

