ಚಂದ್ರವಳ್ಳಿ ನ್ಯೂಸ್ ಹಿರಿಯೂರು :
ತಾಲೂಕಿನ ಐಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಹಿರಿಯೂರಿನಿಂದ ದಾವಣಗೆರೆ ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಗಾಯಾಳುಗಳಿಗೆ ಚಿತ್ರದುರ್ಗ,ಹಿರಿಯೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ನೀಡಲಾಗಿದ್ದು ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ.
ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.