ಭಾರೀ ಮಳೆಗೆ ಭೂ ಕುಸಿತ, ಆತಂಕದಲ್ಲಿ ಮಾನ್ಯತಾ ಟೆಕ್ ಪಾರ್ಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ಎರಡು ಮೂರು ದಿನಗಳಿಂದ ಬೆಂಗಳೂರಿನಾದ್ಯಂತ ಬಿಟ್ಟು ಬಿಡದಂತೆ ಕಾಡುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿರುವ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಭೂ ಕುಸಿತದ ಭೀತಿ ಆರಂಭವಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು ಮಾನ್ಯತಾ ಟೆಕ್ ಪಾರ್ಕ್‌ ಕೆರೆಯಂತಾಗಿತ್ತು. ಈಗ ಭೂ ಕುಸಿತ ಆರಂಭವಾಗಿದೆ.

ಮಾನ್ಯತಾ ಟೆಕ್ ಪಾರ್ಕ್‌ಸುಮಾರು 300 ಎಕರೆ ಪ್ರದೇಶದಲ್ಲಿದ್ದು ಸಂಪೂರ್ಣ ಮಳೆನೀರು ತುಂಬಿಕೊಂಡಿದೆ. ರಸ್ತೆ ತುಂಬಾ ನೀರು ತುಂಬಿಕೊಂಡು ವಾಹನಗಳು ಅದರಲ್ಲಿ ಸಿಲುಕಿ ಸಂಚಾರಕ್ಕೆ ಸವಾರರು ಪರದಾಡುವಂತಾಗಿದೆ.

 ಮಾನ್ಯತಾ ಟೆಕ್ ಪಾರ್ಕ್ ರಸ್ತೆ ಜಲಾವೃತಗೊಂಡಿದ್ದು, ಟೆಕ್ ಪಾರ್ಕ್ ಆವರಣದ ಮುಂಭಾಗದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಲ್ಲಿ ಮಣ್ಣು ಕುಸಿತ ಸಂಭವಿಸಿದೆ.

ಪರಿಣಾಮವಾಗಿ ಬೃಹತ್ ಮರವೊಂದು ಆವರಣದ ಒಳಗೆ ಬಿದ್ದಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದ ಕಾರಣ ಮಾನ್ಯತಾ ಟೆಕ್ ಪಾರ್ಕ್ ಅಕ್ಷರಶಃ ಕೆರೆಯಂತಾಗಿದ್ದು, ಮಂಗಳವಾರ ನಾಲ್ಕೈದು ಅಡಿ ಎತ್ತರಕ್ಕೆ ನೀರು ನಿಂತುಕೊಂಡಿತ್ತು.

ಇದೀಗ ಇದೇ ಮಳೆ ನೀರು ಪ್ರವಾಹದಿಂದಾಗಿ ಇಲ್ಲಿನ ಮಣ್ಣು ಸಡಿಲಗೊಂಡು, ಬೃಹತ್ ಮರ ಮತ್ತು ತಾತ್ಕಾಲಿಕ ಶೆಡ್ ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";