ಗ್ರಾಪಂ ಅಧ್ಯಕ್ಷರಾಗಿ ಮಂಗಳ ಗೌರಮ್ಮ ಅವಿರೋಧ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಂಗಳ ಗೌರಮ್ಮ ಕೃಷ್ಣಮೂರ್ತಿ ಅವಿರೋದವಾಗಿ ಆಯ್ಕೆಯಾಗಿದ್ದಾರೆ.

- Advertisement - 

      ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದ ನಿರ್ಮಲಾ ಸಿದ್ದೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಮಂಗಳ ಗೌರಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಮಂಗಳ ಗೌರಮ್ಮ ನವರು ಅವಿರೋದವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

- Advertisement - 

      ನೂತನ ಅಧ್ಯಕ್ಷೆ ಮಂಗಳ ಗೌರಮ್ಮ ಮಾತನಾಡಿ ನಾನು ಬಡ ಕುಟುಂಬದಿಂದ ಬಂದಿದ್ದು ಪಂಚಾಯ್ತಿ ವ್ಯಾಪ್ತಿಯ ಬಡ ವರ್ಗಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜೊತೆಗೆ ಹಿರಿಯ ಸದಸ್ಯಳಾಗಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂಬ ಹಂಬಲ ನನ್ನದು.

ಈ ದಿಸೆಯಲ್ಲಿ ಮಾಜಿ ಶಾಸಕರಾದ ಅಪಕಾರನ ಹಳ್ಳಿ ವೆಂಕಟರಮಣಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಚುಂಚಗೌಡರ ಮಾರ್ಗದರ್ಶನದಲ್ಲಿ ಪಂಚಾಯ್ತಿಯ ಎಲ್ಲಾ ಸದಸ್ಯರ ಸಹಮತದೊಂದಿಗೆ ಪಂಚಾಯ್ತಿ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತೇನೆ. ನನ್ನನ್ನು ಅಧ್ಯಕ್ಷರನ್ನಾಗಿ ಮಾಡಲು ಸಹಕರಿಸಿದ ವೆಂಕಟೇಶ್, ಕೆಂಪಣ್ಣ, ದ್ರುವಕುಮಾರ್, ಸಿದ್ದೇಗೌಡ ಸೇರಿದಂತೆ ಎಲ್ಲರಿಗೂ ನಾನು ಅಭಾರಿಯಾಗಿದ್ದೇನೆ ಎಂದು ಮಂಗಳಗೌರಮ್ಮ ಹೇಳಿದರು.

- Advertisement - 

    ನೂತನ ಅಧ್ಯಕ್ಷರಿಗೆ ಪುಷ್ಪ ಮಾಲೆ ನೀಡಿ ಸಿಹಿ ತಿನಿಸುವ ಮೂಲಕ ಸದಸ್ಯರು, ಕಾಂಗ್ರೆಸ್ ಮುಖಂಡರು ಶುಭ ಕೋರಿದರು. ಪಟಾಕಿ ಸಿಡಿಸುವ ಮೂಲಕ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.

     ಈ ಸಂದರ್ಭದಲ್ಲಿ ಪಂಚಾಯ್ತಿ ಉಪಾಧ್ಯಕ್ಷ ಡಿ. ಆರ್. ದ್ರುವಕುಮಾರ್, ಮಾಜಿ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಕೆಂಪಣ್ಣ, ನಗರಸಭಾ ಸದಸ್ಯರಾದ ಚಂದ್ರ ಮೋಹನ್, ರಘು, ಮಂಜುನಾಥ್, ಭೀಮಣ್ಣ ಮುಂತಾದವರು ಹಾಜರಿದ್ದರು.

 

 

 

Share This Article
error: Content is protected !!
";