ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹುತಾತ್ಮರ ದಿನ ಆಚರಿಸಲಾಗಿದ್ದು, ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡು, ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  

- Advertisement - 

ಉಪವಿಭಾಗಾಧಿಕಾರಿ ವೆಂಕಟೇಶ್ ನಾಯಕ್ ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದು, ಈ ಸಂದರ್ಭದಲ್ಲಿ ಮೌನ ಆಚರಿಸಿ ಗೌರವ ಸಮರ್ಪಿಸಿದರು.

 

- Advertisement - 

 

 

Share This Article
error: Content is protected !!
";