ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ! ಬಿಡಲಾಗಿದೆ ಎಂದು ಜೆಡಿಎಸ್ ಟೀಕಿಸಿದೆ.
ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ ನಡೆದಿದೆ. ಇದು ಅಮಾನವೀಯ.
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಕಣ್ಮರೆಯಾಗಿದೆ. ಅಪರಾಧಿಗಳು, ಕಾಮುಕರು, ದರೋಡೆಕೋರರು ಹಾಡಹಗಲೇ ನಿರ್ಭೀತಿಯಿಂದ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ.
ಗೃಹ ಇಲಾಖೆ ಹೊಣೆ ಹೊತ್ತಿರುವ ಅಸಮರ್ಥ ಮಂತ್ರಿ ಡಾ.ಜಿ.ಪರಮೇಶ್ವರ ಅವರಿಂದ ರಾಜ್ಯದ ಜನರ ರಕ್ಷಣೆ ಮರೀಚಿಕೆಯಾಗಿದೆ. ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಲೈಂಗಿಕ ಕಿರುಕುಳ, ಅತ್ಯಾಚಾರ, ದರೋಡೆ, ಕೊಲೆ, ಹಲ್ಲೆ, ದೌರ್ಜನ್ಯಗಳಾಗುತ್ತಿದ್ದರೂ ಸರ್ಕಾರ ಗಾಢ ನಿದ್ದೆಯಲ್ಲಿದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಚಲುವರಾಯಸ್ವಾಮಿ ಬರೀ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೃಷಿ ಇಲಾಖೆಯಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ, ಅಬಕಾರಿ ವರ್ಗಾವಣೆ ದಂಧೆ, ಕಾಮಗಾರಿಗಳಲ್ಲಿ ಕಮಿಷನ್‌ವ್ಯವಹಾರದಲ್ಲಿ ಸಂಪೂರ್ಣ ತೊಡಗಿದ್ದು, ಜಿಲ್ಲೆಯನ್ನು ನಿರ್ಲಕ್ಷ್ಯಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಸಿದ್ದರಾಮಯ್ಯ ಸರ್ಕಾರ ಎಲ್ಲ ವಿಧದಲ್ಲಿಯು ಸಂಪೂರ್ಣ ವಿಫಲವಾಗಿದೆ.
ಹಿಂದಿನ ಸರ್ಕಾರಗಳ ಆಡಳಿತದಲ್ಲಿ ರೇಪ್‌ಆಗಿಲ್ವಾ ಎನ್ನುವ ಸಿದ್ದರಾಮಯ್ಯ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ! ಎಂದು ಜೆಡಿಎಸ್ ಖಾರವಾಗಿ ಪ್ರಶ್ನಿಸಿದೆ.