ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾ ಆಸ್ಪತ್ರೆ, ನಗರಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಜೂನ್ 26ರಂದು ಬೆಳಿಗ್ಗೆ 9 ರಿಂದ 4 ರವರೆಗೆ ಚಿತ್ರದುರ್ಗ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ “ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ” ಹಮ್ಮಿಕೊಳ್ಳಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತಿವಹಿಸುವರು. ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, 3ನೇ ವಾರ್ಡ್ ನಗರಸಭೆ ಸದಸ್ಯ ಹೆಚ್.ಶ್ರೀನಿವಾಸ್, ಜ್ಞಾನ ವಿಕಾಸ ವಿದ್ಯಾಸಂಸ್ಥೆ ಖಜಾಂಚಿ ಆರ್.ರಾಜೇಶ್ ಮದರಿ ಭಾಗವಹಿಸುವರು.
ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗಹಿಸುವರು ಎಂದು ಪ್ರಕಟಣೆ ತಿಳಿಸಿದೆ.