ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆಯ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಈ ಉದ್ಯೋಗಮೇಳದ ಅಂಗವಾಗಿ ದಾವಣಗೆರೆಯ ಗೃಹ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಉದ್ಯೋಗ ಮೇಳದಲ್ಲಿ ಐಟಿ ವಲಯ, ಫೈನಾನ್ಸ್, ಬ್ಯಾಂಕಿಂಗ್, ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್, ಬಿ.ಪಿ.ಒ, ವಾಯ್ಸ್, ರೀಟೈಲ್, ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.
ಉದ್ಯೋಗ ಹುಡುಕುತ್ತಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಸಂಸದರು ವಿನಂತಿಸಿದ್ದಾರೆ.

