ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ, ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾವಣೆ ಮಾಡಿ ವಿಬಿಜಿ ರಾಮ್ ಜಿ ಹೆಸರಿಡಿರುವ ಜನವಿರೋಧಿ ನಿರ್ಧಾರದ ವಿರುದ್ಧ ತೀವ್ರವಾಗಿ ವಿರೋಧ ವ್ಯಕ್ತಪಡಿಸಿಲಾಯಿತು.
ಮಸ್ಕಲ್ ಗ್ರಾಮದಿಂದ ಹಿರಿಯೂರು ನಗರದ ವರೆಗೆ ಬೃಹತ್ ಪಾದಯಾತ್ರೆ ಮೂಲಕ ನೆಹರು ಮೈದಾನ. ಅವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗ್ರಾಮೀಣ ಬಡವರು, ಕೂಲಿ ಕಾರ್ಮಿಕರು, ಮಹಿಳೆಯರು ಹಾಗೂ ಶ್ರಮಿಕ ವರ್ಗದ ಆಶಾಕಿರಣವಾಗಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಮೂಲ ಆತ್ಮವನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಒಪ್ಪುವುದಿಲ್ಲ. ಮಹಾತ್ಮ ಗಾಂಧಿಯವರ ಹೆಸರು ಕೇವಲ ಹೆಸರು ಅಲ್ಲ – ಅದು ಶ್ರಮ, ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರತೀಕ.
ಯೋಜನೆಯ ಹೆಸರನ್ನು ಬದಲಿಸುವ ಮೂಲಕ ಕಾರ್ಮಿಕರ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ, ಶ್ರಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮುಂದುವರಿಸುವ ಸಂದೇಶವನ್ನು ಈ ಪಾದಯಾತ್ರೆಯ ಮೂಲಕ ಸಾರಿದೆವು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಡಿ ಸುಧಾಕರ್ ಬಿ.ಎಂ.ಟಿ.ಸಿ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ ಆದಿಜಾಂಭವ ನಿಗಮದ ಅಧ್ಯಕ್ಷರಾದ ಜಿ.ಎಸ್ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು,ತಾಲೂಕು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷರು,ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರು ,
ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ವಿವಿಧ ಸೆಲ್ ಅಧ್ಯಕ್ಷರು,ನಗರಸಭೆ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

