ಕಂದಾಯ ಮತ್ತು ಅರಣ್ಯ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಭದ್ರಾವತಿ:
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯನಾಯಕ್ ಅವರ ನೇತೃತ್ವದಲ್ಲಿ
ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತರಕ್ಷಣಾ ಸಮಿತಿ, ಭದ್ರಾವತಿ ಹಾಗೂ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಭದ್ರಾವತಿಯ ರಂಗಪ್ಪ ಸರ್ಕಲ್ ನಿಂದ ತಹಶೀಲ್ದಾರ್  ಕಚೇರಿ ಹಾಗೂ ಅರಣ್ಯ ಸಂರಕ್ಷಣಾ ಅಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ ನಡೆಸಿಅಧಿಕಾರಿಗಳ ದೌರ್ಜನ್ಯ ಮತ್ತು ಅನ್ಯಾಯದ ವಿರುದ್ಧ ರೈತರಿಗೆ ಧೈರ್ಯ ತುಂಬಲಾಯಿತು.

ಈ ಸಂದರ್ಭದಲ್ಲಿ ಭದ್ರಾವತಿ ಕ್ಷೇತ್ರದ ಮುಖಂಡರಾದ ಶಾರದಾ ಅಪ್ಪಾಜಿಗೌಡ ಅವರು ಸೇರಿದಂತೆ ತಾಲ್ಲೂಕು ಘಟಕಗಳ ಎಲ್ಲಾ ಅಧ್ಯಕ್ಷರು, ಮುಖಂಡರು, ಪದಾಧಿಕಾರಿಗಳು, ಮಹಿಳಾ ಮುಖಂಡರು, ರೈತರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

 

Share This Article
error: Content is protected !!
";